ಅವಂತಿಪೋರಾ, ಜಮ್ಮು ಕಾಶ್ಮೀರ: ಅವಂತಿಪೋರಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಬುಧವಾರ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಅವಂತಿಪೋರಾದಲ್ಲಿ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಅನ್ಸಾರ್ ಘಜ್ವತ್-ಉಲ್-ಹಿಂದ್ ಸಂಘಟನೆಯ ಸಫತ್ ಮುಜಾಫರ್ ಸೋಫಿ ಮತ್ತು ಎಲ್ಇಟಿ ಉಗ್ರ ಉಮರ್ ತೇಲಿ ಎಂಬುವರನ್ನು ಟ್ರಾಲ್ ಪ್ರದೇಶದಲ್ಲಿ ಕೊಲ್ಲಲಾಗಿದೆ. ಈ ಇಬ್ಬರೂ ಶ್ರೀನಗರ ನಗರದಲ್ಲಿ ಹಲವಾರು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಖಾನ್ಮೋಹ್ನಲ್ಲಿ ಸರಪಂಚ್ ಸಮೀರ್ ಅಹ್ಮದ್ ಹತ್ಯೆಯಲ್ಲಿ ಇವರು ಭಾಗಿಯಾಗಿದ್ದರು ಎಂದು ಕಾಶ್ಮೀರ ಐಜಿಪಿ ಟ್ವೀಟ್ ಮಾಡಿದ್ದಾರೆ.