ನೋಯ್ಡಾ(ಉತ್ತರಪ್ರದೇಶ):ಪ್ರಥಮ ವರ್ಷದ ಹುಟ್ಟುಹಬ್ಬದ ದಿನವೇ ಕಟ್ಟಡದ 12ನೇ ಮಹಡಿಯಿಂದ ಬಿದ್ದ ಮಗುವೊಂದು ದುರ್ಮರಣಕ್ಕೀಡಾಗಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಸಂಭ್ರಮದಿಂದ ತೇಲಾಡುತ್ತಿದ್ದ ಕುಟುಂಬದಲ್ಲಿ ಕ್ಷಣಾರ್ಧದಲ್ಲಿ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.
ಗ್ರೇಟರ್ ನೋಯ್ಡಾಡದ ಬಿಸ್ರಾಖ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಸಾ ಗ್ರೀನ್ಸ್ 1 ಹೌಸಿಂಗ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿರುವ ಮಗುವನ್ನ ರಿವಾನ್ ಎಂದು ಗುರುತಿಸಲಾಗಿದೆ.