ನವದೆಹಲಿ:2023ರ ಮಾರ್ಚ್ 31ರೊಳಗೆ ಆಧಾರ್ ಜೊತೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) 2022ರ ಜೂನ್ 30ನಂತರ ಆಧಾರ್ ಕಾರ್ಡ್‌ನೊಂದಿಗೆ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡಲು ಒಂದು ಸಾವಿರ ರೂಪಾಯಿಗಳ ವಿಳಂಬ ಶುಲ್ಕವನ್ನು ವಿಧಿಸಲಾಗುತ್ತಿದೆ. ಮಾರ್ಚ್ 31ರೊಳಗೆ ದಂಡವನ್ನು ಪಾವತಿಸದೇ ಆಧಾರ್ ಕಾರ್ಡ್‌ನೊಂದಿಗೆ ಪ್ಯಾನ್‌ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ. ಇಲ್ಲದಿದ್ದರೆ, ನಿಮ್ಮ ಪ್ಯಾನ್ ನಿಷ್ಕ್ರಿಯವಾಗುತ್ತದೆ. ಈ ಕಾರಣದಿಂದಾಗಿ ನೀವು ಹಣಕಾಸಿನ ವ್ಯವಹಾರಗಳು ಅಥವಾ ಹಣಕಾಸಿನ ಕೆಲಸಗಳಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಈ ಸಮಸ್ಯೆಗಳನ್ನು ತಪ್ಪಿಸಲು, ಇಂದೇ ಆಧಾರ್ ಮತ್ತು ಪ್ಯಾನ್ ಲಿಂಕ್ ಮಾಡಿಕೊಳ್ಳಿ.
10 ಸಾವಿರದವರೆಗೆ ದಂಡ ವಿಧಿಸಬಹುದು:ಆದಾಯ ತೆರಿಗೆ ಇಲಾಖೆ ಟ್ವೀಟ್ ಮಾಡಿದ್ದು, ಆದಷ್ಟು ಬೇಗ ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವಂತೆ ಜನರನ್ನು ಒತ್ತಾಯಿಸಿದೆ. ಇಲ್ಲದಿದ್ದರೆ, ನೀವು ನಂತರ ಭಾರೀ ದಂಡವನ್ನು ಪಾವತಿಸಬೇಕಾಗಬಹುದು. ಮಾರ್ಚ್ 31ರೊಳಗೆ ಎರಡೂ ದಾಖಲೆಗಳನ್ನು ಲಿಂಕ್ ಮಾಡಲು ಕೇವಲ 1,000 ರೂ.ಗಳನ್ನು ದಂಡವಾಗಿ ಪಾವತಿಸಬೇಕಾಗುತ್ತದೆ. ಅದೇ ಸಮಯದಲ್ಲಿ, ಏಪ್ರಿಲ್ 1ರಿಂದ ಪ್ಯಾನ್ ಅನ್ನು ಪುನಃ ಸಕ್ರಿಯಗೊಳಿಸಲು 10,000 ರೂ. ದಂಡವನ್ನು ಪಾವತಿಸಬೇಕಾಗುತ್ತದೆ. ಇದರ ನಂತರವೇ ನಿಮ್ಮ ಪ್ಯಾನ್‌ಕಾರ್ಡ್ ಅನ್ನು ಸಕ್ರಿಯಗೊಳಿಸಲಾಗುತ್ತದೆ.
ಪ್ಯಾನ್ ನಿಷ್ಕ್ರಿಯವಾದರೆ ಆಗುವ ಅನಾನುಕೂಲಗಳೇನು ಗೊತ್ತಾ?:ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಿದ್ದರೆ, ತೆರಿಗೆದಾರರು ತಮ್ಮ ಆದಾಯ ತೆರಿಗೆ ರಿಟರ್ನ್ ಅನ್ನು ಸಲ್ಲಿಸಲು ಸಾಧ್ಯವಾಗುವುದಿಲ್ಲ. ಇದರೊಂದಿಗೆ, ನೀವು ಷೇರು ಮಾರುಕಟ್ಟೆ, ಮ್ಯೂಚುವಲ್ ಫಂಡ್ ಇತ್ಯಾದಿಗಳಲ್ಲಿ ಹೂಡಿಕೆ ಮಾಡಲು ಸಾಧ್ಯವಾಗುವುದಿಲ್ಲ. ಗಮನಾರ್ಹವಾಗಿ, 50,000ಕ್ಕಿಂತ ಹೆಚ್ಚಿನ ವಹಿವಾಟುಗಳಿಗೆ, ಆಧಾರ್ ಕಾರ್ಡ್ ಅಗತ್ಯವಿದೆ. ಸರ್ಕಾರ ಪ್ಯಾನ್ ಮತ್ತು ಆಧಾರ್ ಅನ್ನು ಏಕೆ ಲಿಂಕ್ ಮಾಡುತ್ತಿದೆ ಎಂಬ ಈ ಪ್ರಶ್ನೆಗೆ ಉತ್ತರವೆಂದರೆ, ಆಧಾರ್ ಮತ್ತು ಪ್ಯಾನ್ ಲಿಂಕ್ ಮಾಡುವ ಮೂಲಕ ಯಾವುದೇ ರೀತಿಯ ವ್ಯವಹಾರವನ್ನು ಟ್ರ್ಯಾಕ್ ಮಾಡಬಹುದು. ಇದು ತೆರಿಗೆ ವಂಚನೆ ಹಾಗೂ ವಂಚನೆಯ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ.