ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ರಾಜ್ಯಸಭೆ ಕಲಾಪ ತಿರಸ್ಕರಿಸಿ ಬಧವಾರವೂ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ 17 ಪ್ರತಿಪಕ್ಷಗಳು ಸಭಾತ್ಯಾಗ ಮಾಡಿದವು. ಡಿಸೆಂಬರ್ 9ರಂದು ಭಾರತ ಮತ್ತು ಚೀನಾದ ಸೈನಿಕರ ನಡುವೆ ತವಾಂಗ್ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆ ಮುಖಾಮುಖಿಯಾಗುವ ಕುರಿತು ಚರ್ಚೆಗೆ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದರು.
ಇದಕ್ಕೆ ಆಡಳಿತ ಪಕ್ಷದ ಸದಸ್ಯರು ವಿರೋಧ ಮಾಡುತ್ತಿದ್ದಂತೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸಹಿತ 17 ಪ್ರತಿಪಕ್ಷಗಳ ನಾಯಕರು ಹೊರನಡೆದರು. ಸಂಸತ್ತಿನ ದಿನದ ಕಲಾಪ ಆರಂಭಕ್ಕೂ ಮುನ್ನ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು 17 ಪ್ರತಿಪಕ್ಷಗಳ ನಾಯಕರ ಜತೆ ಚರ್ಚೆಗೆ ಬುಧವಾರ ಸಭೆ ನಡೆಸಿದ್ದರು.