ಕರ್ನಾಟಕ

karnataka

ETV Bharat / bharat

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವುದೇ ನಮ್ಮ ಗುರಿ: ಮುರಳೀಧರ್ ರಾವ್ - ಹೈದರಾಬಾದ್​ನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ

ಹೈದರಾಬಾದ್​ನಲ್ಲಿ ಇಂದಿನಿಂದ 2 ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆಯ ಭಾಗವಾಗಿ ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಯಿತು.

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವುದು ನಮ್ಮ ಗುರಿ: ಮುರಳೀಧರ್ ರಾವ್
ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ತರುವುದು ನಮ್ಮ ಗುರಿ: ಮುರಳೀಧರ್ ರಾವ್

By

Published : Jul 2, 2022, 8:56 AM IST

ಹೈದರಾಬಾದ್:ತೆಲಂಗಾಣ ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಅಧಿಕಾರಕ್ಕೆ ತರುವುದೇ ನಮ್ಮ ಗುರಿ ಎಂದು ಮಧ್ಯಪ್ರದೇಶದ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಹೇಳಿದ್ದಾರೆ. ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳ ಕಾರ್ಯಕರ್ತರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತೆಲಂಗಾಣ ರಾಜ್ಯದಲ್ಲಿರುವುದು ಕೆಸಿಆರ್ ಕುಟುಂಬ ಆಡಳಿತ. ಈ ಆಡಳಿತವನ್ನು ಕೊನೆಗಾಣಿಸಲು ರಾಜ್ಯದ ಜನತೆ ಸಿದ್ಧರಾಗಿದ್ದಾರೆ ಎಂದು ಮುರಳೀಧರ ರಾವ್ ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಗಳಿಂದ ಆಕರ್ಷಿತರಾದ ಇಲ್ಲಿನ ಜನರು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ತರಲು ಸಿದ್ಧರಾಗಿದ್ದಾರೆ ಎಂದು. ರಾಷ್ಟ್ರೀಯ ನಾಯಕರು ಎರಡು ದಿನಗಳ ಕಾಲ ರಾಜ್ಯದ ಪ್ರತಿ ಕ್ಷೇತ್ರಕ್ಕೆ ತೆರಳಿ ಕೇಂದ್ರದ ಆಡಳಿತದ ಬಗ್ಗೆ ಜನರಿಗೆ ಅರಿವು ಮೂಡಿಸಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ತರಲು ಶ್ರಮಿಸಲಿದ್ದಾರೆ ಎಂದರು.

ತೆಲಂಗಾಣದಲ್ಲಿ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಬಿಜೆಪಿ ಬಲಪಡಿಸುವುದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ ರಾಯ್, ಬಿಹಾರ ಉಪ ಮುಖ್ಯಮಂತ್ರಿ ರೇಣುದೇವಿ, ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ರಾಧಾ ಮೋಹನ್ ಸಿಂಗ್, ನಟ, ಸಂಸದ ಮನೋಜ್ ತಿವಾರಿ ಉಪಸ್ಥಿತರಿದ್ದರು.

ಓದಿ:ಭಾಗ್ಯನಗರಿಯಲ್ಲಿ ಇಂದಿನಿಂದ 2 ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ

ABOUT THE AUTHOR

...view details