ಪಣಜಿ: ದಕ್ಷಿಣ ಗೋವಾದ ಪ್ರಸಿದ್ಧ ದೂಧ್ ಸಾಗರ್ ಜಲಪಾತದಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ ಕೇಬಲ್ ಸೇತುವೆ ಕುಸಿದು ಬಿದ್ದಿದ್ದು, 40ಕ್ಕೂ ಹೆಚ್ಚು ಪ್ರವಾಸಿಗರನ್ನ ರಕ್ಷಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಶುಕ್ರವಾರ ಸಂಜೆ ಘಟನೆ ನಡೆದಿದ್ದು, ಗೋವಾ - ಕರ್ನಾಟಕ ಗಡಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಲಪಾತದ ನೀರಿನ ಮಟ್ಟ ಏರಿಕೆಯಾಗಿದೆ. ಪರಿಣಾಮ ಸೇತುವೆ ಕುಸಿದಿದ್ದು, 40ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಅಪಾಯದಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಆದರೆ, 'ದೃಷ್ಟಿ ಲೈಫ್ ಸೇವರ್ಸ್' ಸಹಾಯದಿಂದ ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ದೃಷ್ಟಿ ಲೈಫ್ ಸೇವರ್ಸ್‌ನ ಪಿಆರ್ಒ ಮಾಹಿತಿ ನೀಡಿದೆ.