ನವದೆಹಲಿ: ಕಳೆದ ಏಳು ವರ್ಷಗಳಲ್ಲಿ ಸೆಪ್ಟೆಂಬರ್ 30ರ ವೇಳೆಗೆ 8 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಪೌರತ್ವ ತ್ಯಜಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. ತೆಲಂಗಾಣ ರಾಷ್ಟ್ರ ಸಮಿತಿ ಸಂಸದ ಕೋಥಾ ಪ್ರಭಾಕರ ರೆಡ್ಡಿ ಅವರು ಎತ್ತಿರುವ ಪ್ರಶ್ನೆಗಳಿಗೆ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಉತ್ತರಿಸಿದ್ದಾರೆ. 8,81,254 ಭಾರತೀಯರು ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ಮಾಹಿತಿ ನೀಡಿದರು.
2020 ರಲ್ಲಿ 85,248 ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ. ಹಾಗೆ 2019 ಮತ್ತು 2018 ರಲ್ಲಿ ಕ್ರಮವಾಗಿ 1,44,017 ಮತ್ತು 1,34,561 ಭಾರತೀಯರು ತಮ್ಮ ಪೌರತ್ವವನ್ನು ತ್ಯಜಿಸಿದ್ದಾರೆ ಎಂದು ರೈ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: Council Result... ಬೆಳಗಾವಿಯಲ್ಲಿ ಬಿಜೆಪಿಗೆ ಭಾರಿ ಮುಖಭಂಗ: ಲಖನ್ ಗೆಲುವು