ಜಮ್ಮು, ಜಮ್ಮು ಕಾಶ್ಮೀರ:ಭೂಮಿ ಅತಿಕ್ರಮಣ ಮಾಡಿಕೊಂಡಿದ್ದ, ಹಲವರ ವಿರುದ್ಧ ಜಮ್ಮು ಕಾಶ್ಮೀರದಲ್ಲಿ ಕ್ರಮ ಜರುಗಿಸಲಾಗಿದೆ. ಅತ್ಯಂತ ಪ್ರಮುಖವಾದ ಸುಮಾರು 7 ಎಕರೆ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ.
ಸಾಂಬಾ ಜಿಲ್ಲೆಯಲ್ಲಿ ಶುಕ್ರವಾರ ಭೂಮಿ ಅತಿಕ್ರಮಣ ವಿರೋಧಿ ಅಭಿಯಾನ ಕೈಗೊಳ್ಳಲಾಗಿದೆ. ಅತಿಕ್ರಮಣ ಮಾಡಲಾಗಿದ್ದ ಭೂಮಿಯನ್ನು ತೆರವುಗೊಳಿಸಲು ಡೆಪ್ಯುಟಿ ಕಮೀಷನರ್ ಅನುರಾಧ ಗುಪ್ತಾ ಅವರು ವಿಶೇಷ ತಂಡವೊಂದನ್ನು ರಚನೆ ಮಾಡಿದ್ದರು.