ಬಾಗ್‌ಪತ್ (ಉತ್ತರ ಪ್ರದೇಶ): ಅಖಿಲ ಭಾರತ ಮಜ್ಲಿಸ್-ಇ-ಇತ್ತೇಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಾಯಕ ಅಸಾದುದ್ದೀನ್ ಓವೈಸಿ ಮತ್ತು ಬಿಜೆಪಿ ಒಂದು ತಂಡವಾಗಿದ್ದು, ರೈತರು ಅವರ ನಡೆಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.
ಓವೈಸಿ ಬಿಜೆಪಿಯ 'ಚಾಚಾ ಜನ್' ಎಂದು ಆರೋಪಿಸಿದ್ದಾರೆ. ಸರ್ಕಾರವು ರೈತರ ಬೇಡಿಕೆಗಳನ್ನು ಒಪ್ಪುವುದಿಲ್ಲ. ಹೀಗಾಗಿ ಕಾನೂನುಗಳನ್ನು ರದ್ದುಗೊಳಿಸುವವರೆಗೂ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಅವರು ಖಡಕ್ ಆಗಿ ಹೇಳಿದರು.