ವಾರಣಾಸಿ:ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಉತ್ತರ ಪ್ರದೇಶದ ವಾರಣಾಸಿಗೆ ತೆರಳಿದ್ದು, ಈ ವೇಳೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದರು.
ವಾರಣಾಸಿ ತಲುಪಿದ ಓವೈಸಿ: ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ - ಉತ್ತರ ಪ್ರದೇಶದಲ್ಲಿ ಒವೈಸಿ
2022ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಮಾತುಕತೆ ನಡೆಸಲು ನಾನು ಉತ್ತರ ಪ್ರದೇಶಕ್ಕೆ ಆಗಮಿಸಿದ್ದೇನೆ ಎಂದು ಓವೈಸಿ ತಿಳಿಸಿದ್ದಾರೆ.
2022ರಲ್ಲಿ ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಇದೇ ವಿಚಾರವಾಗಿ ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷದ(ಎಸ್ಬಿಎಸ್ಪಿ) ಮುಖ್ಯಸ್ಥ ಓಂ ಪ್ರಕಾಶ್ ರಾಜ್ಭರ್ ಜತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.
ವಾರಣಾಸಿ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಅಖಿಲೇಶ್ ಸರ್ಕಾರವಿದ್ದಾಗ ನನಗೆ ಇಲ್ಲಿಗೆ ಬರಲು ಅನುಮತಿ ನೀಡಿರಲಿಲ್ಲ ಎಂದಿದ್ದಾರೆ. 2022ರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಭರ್ ಜೀ ಜೊತೆ ಮಾತುಕತೆ ನಡೆಸುವುದಾಗಿ ಹೇಳಿರುವ ಅವರು, ಮುಂದಿನ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸ್ಪರ್ಧೆ ಮಾಡಲಿದ್ದೇವೆ ಎಂದಿದ್ದಾರೆ. ಅಖಿಲೇಶ್ ಯಾದವ್ ಯುಪಿ ಸಿಎಂ ಆಗಿದ್ದ ವೇಳೆ ನಾನು ಇಲ್ಲಿಗೆ ಬರಲು 12 ಸಲ ಪ್ರಯತ್ನ ಮಾಡಿದ್ದೇನೆ. ಆದರೆ ಅನುಮತಿ ನಿರಾಕರಣೆ ಮಾಡಲಾಗಿದೆ ಎಂದು ಓವೈಸಿ ತಿಳಿಸಿದರು.