ಕರ್ನಾಟಕ

karnataka

By

Published : Jun 19, 2022, 3:38 PM IST

ETV Bharat / bharat

ನೂಪುರ್ ಶರ್ಮಾರನ್ನು ದೆಹಲಿ ಸಿಎಂ ಅಭ್ಯರ್ಥಿಯನ್ನಾಗಿ ಮಾಡುವ ಸಾಧ್ಯತೆ ಇದೆ : ಓವೈಸಿ

ನೂಪುರ್ ಶರ್ಮಾ ಅವರನ್ನು ಬಂಧಿಸಬೇಕು, ಅವರ ವಿರುದ್ಧ ಭಾರತದ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ನಾವು ಸಂವಿಧಾನದ ಪ್ರಕಾರ ಕ್ರಮವನ್ನು ಬಯಸಿದ್ದೇವೆ ಎಂದ ಅವರು, ಮುಂಬರುವ ಆರು-ಏಳು ತಿಂಗಳಲ್ಲಿ ನೂಪುರ್ ಶರ್ಮಾ ಅವರನ್ನು ದೊಡ್ಡ ನಾಯಕಿಯನ್ನಾಗಿ ಮಾಡಲಾಗುತ್ತದೆ ಎಂದು ನನಗೆ ತಿಳಿದಿದೆ ಎಂದು ಓವೈಸಿ ಕಿಡಿಕಾರಿದ್ದಾರೆ.

ನೂಪುರ್ ಶರ್ಮಾರನ್ನು ದೆಹಲಿ ಸಿಎಂ ಅಭ್ಯರ್ಥಿಯನ್ನಾಗಿ ಮಾಡುವ ಸಾಧ್ಯತೆ ಇದೆ : ಓವೈಸಿ
ನೂಪುರ್ ಶರ್ಮಾರನ್ನು ದೆಹಲಿ ಸಿಎಂ ಅಭ್ಯರ್ಥಿಯನ್ನಾಗಿ ಮಾಡುವ ಸಾಧ್ಯತೆ ಇದೆ : ಓವೈಸಿ

ಹೈದರಾಬಾದ್ (ತೆಲಂಗಾಣ): ಪ್ರವಾದಿ ಮುಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಅಮಾನತುಗೊಂಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬಂಧಿಸುವಂತೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಒತ್ತಾಯಿಸಿದ್ದಾರೆ. ನೂಪುರ್ ಶರ್ಮಾ ಅವರನ್ನು ದೊಡ್ಡ ನಾಯಕಿ ಎಂದು ಬಿಂಬಿಸಲಾಗುತ್ತಿದೆ ಮತ್ತು ದೆಹಲಿ ಸಿಎಂ ಸ್ಥಾನಕ್ಕೆ ಅಭ್ಯರ್ಥಿಯೂ ಆಗಬಹುದು ಎಂದು ಓವೈಸಿ ಇದೇ ವೇಳೆ ವ್ಯಂಗ್ಯವಾಡಿದ್ದಾರೆ.

ನೂಪುರ್ ಶರ್ಮಾ ಅವರನ್ನು ಬಂಧಿಸಬೇಕು, ಅವರ ವಿರುದ್ಧ ಭಾರತದ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಬೇಕು. ನಾವು ಸಂವಿಧಾನದ ಪ್ರಕಾರ ಕ್ರಮವನ್ನು ಬಯಸಿದ್ದೇವೆ ಎಂದ ಅವರು, ಮುಂಬರುವ ಆರು-ಏಳು ತಿಂಗಳಲ್ಲಿ ನೂಪುರ್ ಶರ್ಮಾ ಅವರನ್ನು ದೊಡ್ಡ ನಾಯಕಿಯನ್ನಾಗಿ ಮಾಡಲಾಗುತ್ತದೆ ಎಂದು ನನಗೆ ತಿಳಿದಿದೆ ಎಂದು ಹೇಳಿದ್ದಾರೆ.

ನೂಪುರ್ ಶರ್ಮಾ ಅವರನ್ನು ದೆಹಲಿ ಸಿಎಂ ಅಭ್ಯರ್ಥಿಯನ್ನಾಗಿ ಮಾಡುವ ಸಾಧ್ಯತೆ, ನೂಪುರ್ ಅವರನ್ನು ಬಿಜೆಪಿ ರಕ್ಷಿಸುತ್ತಿದೆ ಎಂದು ಓವೈಸಿ ಆರೋಪಿದರು. ಪ್ರಧಾನಿಗೆ ಮನವಿ ಮಾಡುತ್ತಿದ್ದೇವೆ, ಆದರೆ ಅವರು ಒಂದು ಮಾತನ್ನೂ ಮಾತನಾಡುವುದಿಲ್ಲ. ಎಐಎಂಐಎಂ ದೂರು ದಾಖಲಿಸಿದೆ. ಹಾಗೆ ಎಫ್‌ಐಆರ್ ಸಹ ದಾಖಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ : ಸ್ಪೈಸ್​ಜೆಟ್ ರೆಕ್ಕೆಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶಿಸಿದ ವಿಮಾನ, 185 ಪ್ರಯಾಣಿಕರು ಸೇಫ್​

ABOUT THE AUTHOR

...view details