ಮೀರತ್(ಉತ್ತರ ಪ್ರದೇಶ):ಉತ್ತರ ಪ್ರದೇಶದ ಕಿಥೌರ್ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೆಹಲಿಗೆ ತೆರಳುತ್ತಿದ್ದ ವೇಳೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ತಮ್ಮ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ಹೇಳಿಕೊಂಡಿದ್ದಾರೆ.
ಮೀರತ್ನಿಂದ ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳುತ್ತಿದ್ದಾಗ ಛಜರ್ಸಿ ಟೋಲ್ ಪ್ಲಾಜಾ ಬಳಿ ಓವೈಸಿ ಕಾರಿನ ಮೇಲೆ 3-4 ಸುತ್ತು ಗುಂಡು ಹಾರಿಸಲಾಗಿದ್ದು, ಕಾರಿನ ಟೈರ್ಗಳು ಪಂಕ್ಚರ್ ಆಗಿವೆ ಎಂದು ಅವರು ತಿಳಿಸಿದ್ದಾರೆ. ತಕ್ಷಣವೇ ಓವೈಸಿ ಬೇರೆ ಕಾರಿನಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಘಟನಾ ಸ್ಥಳಕ್ಕೆ ಈಗಾಗಲೇ ಭೇಟಿ ನೀಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆಂದು ತಿಳಿದುಬಂದಿದೆ.