ಕರ್ನಾಟಕ

karnataka

ETV Bharat / bharat

ದಕ್ಷಿಣ ಗೋವಾ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆ: ಎಲ್ಲರೂ ಪ್ರಾಣಾಪಾಯದಿಂದ ಪಾರು - ದಕ್ಷಿಣ ಗೋವಾ ಜಿಲ್ಲಾಸ್ಪತ್ರೆ

ದಕ್ಷಿಣ ಗೋವಾ ಜಿಲ್ಲಾಸ್ಪತ್ರೆಯಲ್ಲಿ ಸಣ್ಣ ಪ್ರಮಾಣದ ಆಮ್ಲಜನಕ ಸೋರಿಕೆಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಗೋವಾ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆ
ದಕ್ಷಿಣ ಗೋವಾ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸೋರಿಕೆ

By

Published : May 11, 2021, 7:22 PM IST

ಪಣಜಿ:ದಕ್ಷಿಣ ಗೋವಾ ಜಿಲ್ಲಾಸ್ಪತ್ರೆಯಲ್ಲಿ (ಎಸ್‌ಜಿಡಿಹೆಚ್) ಇಂದು ಮಧ್ಯಾಹ್ನ ಮುಖ್ಯ ಶೇಖರಣಾ ತೊಟ್ಟಿಗೆ ಅನಿಲ ತುಂಬುತ್ತಿದ್ದಾಗ ಸಣ್ಣ ಪ್ರಮಾಣದ ಆಮ್ಲಜನಕ ಸೋರಿಕೆಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಓರ್ವನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಟ್ಯಾಂಕರ್​ನಿಂದ ಆಮ್ಲಜನಕವನ್ನು ಮುಖ್ಯ ಟ್ಯಾಂಕರ್​ಗೆ ವರ್ಗಾಯಿಸುವಾಗ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಆಮ್ಲಜನಕ ಸೋರಿಕೆಯನ್ನು ತಡೆಗಟ್ಟಿದ್ದಾರೆ.

ಘಟನಾ ಸ್ಥಳಕ್ಕಾಗಮಿಸಿದ ಹಿರಿಯ ಅಧಿಕಾರಿಗಳು ಅವಘಡಕ್ಕೆ ಏನು ಕಾರಣ ಎಂಬುದನ್ನು ಪರಿಶೀಲಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

ರಾಜ್ಯದಲ್ಲಿ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡ್ತಿರುವ ಅತಿದೊಡ್ಡ ಸರ್ಕಾರಿ ಆಸ್ಪತ್ರೆಗಳಲ್ಲಿ ಎಸ್‌ಜಿಡಿಹೆಚ್ ಕೂಡ ಒಂದಾಗಿದೆ.

ABOUT THE AUTHOR

...view details