ನವದೆಹಲಿ:ದೇಶದಲ್ಲಿ ಮಹಾಮಾರಿ ಕೊರೊನಾ ತೀವ್ರತೆ ದಿನದಿಂದ ದಿನಕ್ಕೆ ಕೈಮೀರಿ ಹೋಗುತ್ತಿದ್ದು, ಕೆಲವೊಂದು ರಾಜ್ಯಗಳಲ್ಲಿ ಹೇಳದಂತಹ ಸ್ಥಿತಿ ನಿರ್ಮಾಣಗೊಂಡಿದೆ. ಇದೇ ವಿಚಾರವನ್ನಿಟ್ಟುಕೊಂಡು ಇದೀಗ ಉತ್ತರ ಪ್ರದೇಶ ಯೋಗಿ ಸರ್ಕಾರ ಹಾಗೂ ಕೇಂದ್ರದ ವಿರುದ್ಧ ಚಿದಂಬರಂ ವಾಗ್ದಾಳಿ ನಡೆಸಿದ್ದಾರೆ.
ಟ್ವೀಟ್ ಮೂಲಕ ವಾಗ್ದಾಳಿ ನಡೆಸಿರುವ ಮಾಜಿ ಹಣಕಾಸು ಸಚಿವರು, ಎಲ್ಲ ಚಾನೆಲ್ಗಳಲ್ಲಿ ನಕಲಿ ದೃಶ್ಯಗಳು ಪ್ರಸಾರಗೊಳ್ಳುತ್ತಿರುವುದೇ? ಪತ್ರಿಕೆಗಳಲ್ಲಿ ಬರುತ್ತಿರುವ ಸುದ್ದಿಗಳು ತಪ್ಪೇ? ಎಲ್ಲ ವೈದ್ಯರು ಸುಳ್ಳು ಹೇಳುತ್ತಿದ್ದಾರೆ? ಕುಟುಂಬದ ಸದಸ್ಯರು ಹೇಳುತ್ತಿರುವುದು ಸುಳ್ಳಾ? ಎಂದು ಟ್ವೀಟ್ ಮೂಲಕ ಪ್ರಶ್ನೆ ಮಾಡಿದ್ದಾರೆ.
ಕಳೆದೆರಡು ದಿನಗಳ ಹಿಂದೆ ಮಾತನಾಡಿದ್ದ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದಲ್ಲಿ ಬೆಡ್, ಔಷಧ, ಹಾಗೂ ಲಸಿಕೆ ಕೊರತೆ ಇಲ್ಲ ಎಂದಿದ್ದರು. ಆದರೆ, ಉತ್ತರ ಪ್ರದೇಶದ ಕೆಲವೊಂದು ಆಸ್ಪತ್ರೆಗಳಲ್ಲಿ ರೆಮ್ಡೆಸಿವಿರ್, ಬೆಡ್ ಹಾಗೂ ಕೋವಿಡ್ ಲಸಿಕೆ ಕೊರತೆ ಕಂಡು ಬಂದಿದೆ. ಇದೇ ವಿಚಾರವಾಗಿ ಮಾಧ್ಯಮಗಳಲ್ಲಿ ತೋರಿಸಿರುವ ಮತ್ತು ಹೇಳುತ್ತಿರುವುದು ಸುಳ್ಳು ಸುದ್ದಿ ಎಂದು ಪ್ರಶ್ನೆ ಮಾಡಿದ್ದಾರೆ.