ನವದೆಹಲಿ:ಖರಗ್‌ಪುರದ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ)ಯ ಮಾಜಿ ನಿರ್ದೇಶಕ ಪ್ರೊ. ಕಸ್ತೂರಿ ಲಾಲ್ ಚೋಪ್ರಾ (87) ಕೋವಿಡ್ ಸೋಂಕಿಗೆ ಒಳಗಾಗಿ ನಿಧನರಾಗಿದ್ದಾರೆ.
ದೆಹಲಿ ಐಐಟಿಯಲ್ಲಿ ಭೌತಶಾಸ್ತ್ರದ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿರುವ ಚೋಪ್ರಾರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದಲ್ಲಿ ಹಾಗೂ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 2008ರಲ್ಲಿ ದೇಶದ ಪ್ರತಿಷ್ಠಿತ ನಾಗರಿಕ ಪ್ರಶಸ್ತಿಗಳಲ್ಲೊಂದಾದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.