ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಪಾಕಿಸ್ತಾನವು ಆಕ್ರಮಿತ ಕಾಶ್ಮೀರದ ಜನರ ಮೇಲೆ ದೌರ್ಜನ್ಯ ಎಸಗುತ್ತಿದ್ದು, ಇದರ ಪರಿಣಾಮಗಳನ್ನು ನೆರೆಯ ರಾಷ್ಟ್ರ ಅನುಭವಿಸಬೇಕಾಗುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
1947ರಲ್ಲಿ ಶ್ರೀನಗರಕ್ಕೆ ಭಾರತೀಯ ವಾಯುಪಡೆಯು ಬಂದಿಳಿದ ದಿನದ ಅಂಗವಾಗಿ ಇಂದು ಆಯೋಜಿಸಿದ್ದ ಶೌರ್ಯ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಅವಳಿ ಕೇಂದ್ರಾಡಳಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಯೇ ಸರ್ಕಾರ ಪ್ರಮುಖ ಗುರಿ ಎಂದು ಹೇಳಿದರು.
ಇದೇ ವೇಳೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಓಕೆ)ವನ್ನು ಮರು ವಶಕ್ಕೆ ಪಡೆಯುವ ಸುಳಿವು ನೀಡಿದ ರಾಜನಾಥ್, ಈಗ ನಾವು ಅಭಿವೃದ್ಧಿ ಪರ್ವವನ್ನು ಆರಂಭಿಸಿದ್ದೇವೆ. ಆಕ್ರಮಿತ ಪ್ರದೇಶದ ಭಾಗವಾದ ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್ ನಮಗೆ ಸೇರಿದಾಗಲೇ ಸಮಗ್ರ ಅಭಿವೃದ್ಧಿ ಪೂರ್ಣವಾಗಲಿದೆ ಎಂದು ತಿಳಿಸಿದರು.