ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.
ಕುಪ್ವಾರ ಬಳಿ ಪಾಕ್ ಸೇನೆಯಿಂದ ಮತ್ತೆ ಕದನ ವಿರಾಮ ಉಲ್ಲಂಘನೆ - ಕುಪ್ವಾರ ಬಳಿ ಪಾಕ್ ಸೇನೆಯಿಂದ ಕದನ ವಿರಾಮ ಉಲ್ಲಂಘನೆ
ಕುಪ್ವಾರಾ ಜಿಲ್ಲೆಯಯ ತಂಗ್ಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ.
ಪಾಕ್ ಸೇನೆಯಿಂದ ಕದನ ವಿರಾಮ ಉಲ್ಲಂಘನೆ
ತಂಗ್ಧರ್ ಸೆಕ್ಟರ್‌ನಲ್ಲಿ ಗುಂಡಿನ ದಾಳಿ ನಡೆಸುವ ಮೂಲಕ ಪಾಕ್ ಪುಂಡಾಟಿಕೆ ಮೆರೆದಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.
ಇತ್ತೀಚೆಗಷ್ಟೆ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ 11 ಪಾಕ್ ಸೈನಿಕರು ಹತರಾಗಿದ್ದರು. ಆದರೂ ತನ್ನ ಉದ್ಧಟತನ ಬಿಡದ ಪಾಕಿಸ್ತಾನ, ಮತ್ತೆ ತನ್ನ ವರಸೆ ಪ್ರಾರಂಭಿಸಿದೆ.