ಶ್ರೀನಗರ (ಜಮ್ಮು ಕಾಶ್ಮೀರ): ಪಾಕ್ನ ಕದನ ವಿರಾಮ ಉಲ್ಲಂಘನೆಗೆ ತಕ್ಕ ಪ್ರತಿಕ್ರಿಯೆ ನೀಡಿರುವ ಭಾರತೀಯ ಸೇನೆ 11 ಮಂದಿ ಪಾಕಿಸ್ತಾನಿ ಸೈನಿಕರನ್ನು ಹೊಡೆದುರುಳಿಸಿದೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ.
ಮುಯ್ಯಿಗೆ ಮುಯ್ಯಿ... ಭಾರತೀಯ ಸೇನೆಯಿಂದ ಪಾಕ್ನ 11 ಮಂದಿ ಸೈನಿಕರು ಹತ - retaliatory firing by Indian Army
16:54 November 13
ಕದನ ವಿರಾಮ ಉಲ್ಲಂಘನೆಗೆ ಸೇನೆ ತಿರುಗೇಟು
ಇದರ ಜೊತೆಗೆ 16 ಮಂದಿ ಗಾಯಗೊಂಡಿದ್ದು, ಮೃತಪಟ್ಟವರಲ್ಲಿ ಎರಡು ಅಥವಾ ಮೂರು ಮಂದಿ ಪಾಕಿಸ್ತಾನ ಆರ್ಮಿ ಸ್ಪೆಷಲ್ ಸರ್ವೀಸ್ ಗ್ರೂಪ್ (ಎಸ್ಎಸ್ಜಿ) ಕಮಾಂಡೋಗಳು ಸೇರಿದ್ದಾರೆ ಎನ್ನಲಾಗಿದೆ.
ಪಾಕಿಸ್ತಾನದ ಉಪಟಳ ಹೆಚ್ಚಾಗುತ್ತಿರುವ ಕಾರಣದಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಹಲವು ಪ್ರದೇಶಗಳಲ್ಲಿ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿಸಿ, ಜನರನ್ನು ಸ್ಥಳಾಂತರ ಮಾಡಲಾಗಿದೆ. ಪಾಕ್ ನಡೆಸಿದ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ನಾಗರಿಕರು ಮೃತಪಟ್ಟಿದ್ದರು.
ಈಗ ಭಾರತೀಯ ಸೇನೆ ಪಾಕಿಸ್ತಾನಕ್ಕೆ ಸೇರಿದ ಬಂಕರ್ಗಳು, ಇಂಧನ ಸಂಗ್ರಹ ಮಾಡುವ ಸ್ಥಳಗಳು ಹಾಗೂ ಲಾಂಚ್ ಪ್ಯಾಡ್ಗಳ ಮೇಲೆ ದಾಳಿ ನಡೆಸಿದೆ ಎಂದು ಭಾರತೀಯ ಸೇನಾ ಮೂಲಗಳು ಮಾಹಿತಿ ನೀಡಿವೆ.