ಪುಣೆ (ಮಹಾರಾಷ್ಟ್ರ): ಎನ್‌ಐಎ ಮತ್ತು ಸಿಬಿಐ ದಾಳಿ ಖಂಡಿಸಿ ನಡೆಸುತ್ತಿದ್ದ ಪಿಎಫ್‌ಐ ಪ್ರತಿಭಟನೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮೊಳಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ಶುಕ್ರವಾರ ನಡೆದ ಪಿಎಫ್‌ಐ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಈ ಘೋಷಣೆ ಕೇಳಿ ಬಂದಿದೆ.
ಇದನ್ನೂ ಓದಿ:ಲಖನೌದಲ್ಲಿ ಆರು ಪಿಎಫ್‌ಐ ಕಾರ್ಯಕರ್ತರ ಬಂಧನ.. ಎನ್‌ಐಎ ಕೇರಳ ಕೋರ್ಟ್ಗೆ ಸಲ್ಲಿಸಿದ ವರದಿಯಲ್ಲೇನಿದೆ?
ಉಗ್ರರ ನಂಟು, ಉಗ್ರ ಚಟುವಟಿಕೆಗೆ ಪ್ರೋತ್ಸಾಹ ಶಂಕೆ ಮೇರೆ ಕೇಂದ್ರ ತನಿಖಾ ದಳಗಳು ಇತ್ತೀಚೆಗೆ ಪಿಎಫ್‌ಐ ಮುಖಂಡರ ನಿವಾಸಿಗಳು ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿವೆ. ಇದನ್ನು ಖಂಡಿಸಿ ಪುಣೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪಿಎಫ್‌ಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ, ಅನೇಕ ಕಾರ್ಯಕರ್ತರು ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂದು ಹೇಳಲಾಗಿದೆ.