ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ಭಾರಿ ಗದ್ದಲ ಕೋಲಾಹಲ ಉಂಟಾಗಿದೆ. ಬಿಜೆಪಿ ಹಾಗೂ ಟಿಎಂಸಿ ಸದಸ್ಯರ ನಡುವೆ ನೂಕಾಟ ತಳ್ಳಾಟವಾಗಿದ್ದು, ಉಭಯ ಶಾಸಕರನ್ನು ತಹಬದಿಗೆ ತರಲು ಸ್ಥಳದಲ್ಲಿದ್ದ ಸಿಬ್ಬಂದಿ ಹರಸಾಹಸ ಪಡುವಂತಾಗಿದೆ.
ಪಶ್ಚಿಮ ಬಂಗಾಳ ವಿಧಾನಸಭೆ ಕಲಾಪದಲ್ಲಿ ಭಾರಿ ಗದ್ದಲ - ಕೋಲಾಹಲ ಬಿರ್‌ಭೂಮ್ ಹತ್ಯಾಕಾಂಡ ಪ್ರಕರಣ ಸಂಬಂಧ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆಗೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ಹಲವು ಬಿಜೆಪಿ ಶಾಸಕರು ಒತ್ತಾಯಿಸಿ ಸದನದ ಬಾವಿಗಿಳಿದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ನೂಕಾಟ ತಳ್ಳಾಟವೂ ನಡೆಯಿತು. ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸುವೇಂದು ಅಧಿಕಾರಿ ಸೇರಿ ಐವರು ಬಿಜೆಪಿ ಶಾಸಕರನ್ನು ಮುಂದಿನ ಆದೇಶದ ವರೆಗೆ ಸದನದಿಂದ ಅಮಾನತು ಮಾಡಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಸುವೇಂದು ಅಧಿಕಾರಿ, ಕಲಾಪದ ಕೊನೆಯ ದಿನವಾದರೂ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ ಬಿಜೆಪಿ ಒತ್ತಾಯಿಸಿದೆ. ಆದರೆ ಆಡಳಿತ ಪಕ್ಷ ಟಿಎಂಸಿ ಕೋಲ್ಕತ್ತ ಪೊಲೀಸರನ್ನು ಸಿವಿಲ್ ಡ್ರೆಸ್‌ನಲ್ಲಿ ಸದನಕ್ಕೆ ಕರೆಸಿ 8-10 ಮಂದಿ ಶಾಸಕರೊಂದಿಗೆ ಗಲಾಟೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಹತ್ಯಾಕಾಂಡ ನಡೆದ ಬಿರ್ಭೂಮ್ನಲ್ಲಿ 40 ಕಚ್ಚಾ ಬಾಂಬ್ಗಳು ಪತ್ತೆ.. ಕೇಸ್ ಲಿಂಕ್ ಬಗ್ಗೆ ತನಿಖೆ