ಕರ್ನಾಟಕ

karnataka

ETV Bharat / bharat

ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ತಡೆ: ಪೋಷಕರು - ಭದ್ರತಾ ಪಡೆ ನಡುವೆ ಮಾರಾಮಾರಿ - VIDEO - ಕಲ್ಲು ತೂರಾಟ

ಸಮಯ ಮೀರಿರುವ ಹಿನ್ನೆಲೆ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲು ನಿರಾಕರಿಸಿದ ಭದ್ರತಾ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ಪೋಷಕರು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಹಲವರಿಗೆ ಗಾಯಗಳಾಗಿವೆ.

parents-and-security-personnel-assaulted-at-the-examination-center
ಪೋಷಕರು-ಭದ್ರತಾ ಪಡೆ ನಡುವೆ ಮಾರಾಮಾರಿ

By

Published : Feb 18, 2021, 5:00 PM IST

ಭೋಜ್​​​ಪುರ್​​ (ಬಿಹಾರ): ಪರೀಕ್ಷಾ ಕೊಠಡಿಯೊಳಗೆ ವಿದ್ಯಾರ್ಥಿಗಳ ಪ್ರವೇಶ ನಿರಾಕರಿಸಿದ ವಿಚಾರಕ್ಕೆ ಭದ್ರತಾ ಸಿಬ್ಬಂದಿ ಹಾಗೂ ಪೋಷಕರ ನಡುವೆ ಮಾರಾಮಾರಿ ನಡೆದಿದೆ. ಇಲ್ಲಿನ ಹರ್ ಪ್ರಸಾದ್ ದಾಸ್​ ಜೈನ್ ಶಾಲೆಯಲ್ಲಿ ನಡೆಯಬೇಕಿದ್ದ 10ನೇ ತರಗತಿ ಪರೀಕ್ಷೆ ವೇಳೆ ಈ ಅವಘಡ ನಡೆದಿದೆ.

ಸಮಯ ಮೀರಿರುವ ಹಿನ್ನೆಲೆ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲು ನಿರಾಕರಿಸಿದ ಭದ್ರತಾ ಸಿಬ್ಬಂದಿ ವಿರುದ್ಧ ರೊಚ್ಚಿಗೆದ್ದ ಪೋಷಕರು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಹಲವರಿಗೆ ಗಾಯಗಳಾಗಿವೆ.

ಪೋಷಕರು-ಭದ್ರತಾ ಪಡೆ ನಡುವೆ ಮಾರಾಮಾರಿ

ರಾಜ್ಯದ ಹಲವೆಡೆ 10 ಮತ್ತು 12ನೇ ತರಗತಿಯ ಪರೀಕ್ಷಗೆಳು ಘೋಷಣೆಯಾಗಿದ್ದು, ಈ ಹಿನ್ನೆಲೆ ಪರೀಕ್ಷಾ ಕೇಂದ್ರಕ್ಕೆ ಮಕ್ಕಳ ಜೊತೆ ಪೋಷಕರು ಸಹ ಆಗಮಿಸಿದ್ದಾರೆ. ಆದರೆ 9:20ಕ್ಕೆ ಆಗಮಿಸಿದ್ದರೂ ಭದ್ರತಾ ಸಿಬ್ಬಂದಿ ಒಳಗೆ ಬಿಡಲಿಲ್ಲ ಎಂದು ಪೋಷಕರು ಆರೋಪಿಸಿದ್ದಾರೆ. ತಡವಾಗಿ ಬಂದಿದ್ದಕ್ಕಾಗಿ ಭದ್ರತಾ ಸಿಬ್ಬಂದಿ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಗೇಟ್ ಬಳಿಯೇ ತಡೆದಿದ್ದಾರೆ. ಈ ವೇಳೆ, ಪೋಷಕರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಸ್ಪರ ಕಲ್ಲು ತೂರಾಟ, ಚಪ್ಪಲಿ ಎಸೆದು ಆಕ್ರೋಶ ಹೊರಹಾಕಿದ್ದಾರೆ.

ಆದರೆ, ಕೇಂದ್ರದ ಮುಖ್ಯದ್ವಾರ 9:30ರ ವರೆಗೂ ತೆರೆಯಲಾಗಿತ್ತು ಎಂದು ಭದ್ರತಾ ಸಿಬ್ಬಂದಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ:ಟ್ರಾನ್ಸ್​ವುಮನ್​ ವರಿಸಿ ಸಾಂಸರಿಕ ಜೀವನಕ್ಕೆ ಕಾಲಿಟ್ಟ ಯುವಕ:

ABOUT THE AUTHOR

...view details