ಕರ್ನಾಟಕ

karnataka

ETV Bharat / bharat

ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅಂತ್ಯಕ್ರಿಯೆಗೆ ಆಗಮಿಸುತ್ತಿರುವ ಗಣ್ಯರು - ಪ್ರಕಾಶ್ ಸಿಂಗ್ ಬಾದಲ್ ಅವರ ಅಂತಿಮ ದರ್ಶನ

ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಅಂತ್ಯಕ್ರಿಯೆ ಇಂದು ನಡೆಯಲಿದ್ದು, ಪಂಜಾಬ್ ಮತ್ತು ರಾಜಸ್ಥಾನದ ಸಿಎಂಗಳು ಪಾಲ್ಗೊಳ್ಳಲಿದ್ದಾರೆ.

Parkash Singh Badal Funeral  Former Chief Minister Parkash Singh Badal  Badal will be cremated today  ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅಂತ್ಯಕ್ರಿಯೆ  ಬಾದಲ್ ಅಂತ್ಯಕ್ರಿಯೆಗೆ ಆಗಮಿಸುತ್ತಿರುವ ಗಣ್ಯರು  ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್  ಪಂಜಾಬ್ ಮತ್ತು ರಾಜಸ್ಥಾನದ ಸಿಎಂ  ಶಿರೋಮಣಿ ಅಕಾಲಿದಳದ ಸಂಸ್ಥಾಪಕ  ಪ್ರಕಾಶ್ ಸಿಂಗ್ ಬಾದಲ್ ಅವರ ಅಂತಿಮ ದರ್ಶನ  ಅಂತಿಮ ನಮನ ಸಲ್ಲಿಸಿದ ಪ್ರಧಾನಿ
ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅಂತ್ಯಕ್ರಿಯೆ

By

Published : Apr 27, 2023, 12:42 PM IST

ಚಂಡೀಗಢ, ಪಂಜಾಬ್​:ಪಂಜಾಬ್‌ನ ಐದು ಬಾರಿ ಮುಖ್ಯಮಂತ್ರಿ ಮತ್ತು ಶಿರೋಮಣಿ ಅಕಾಲಿದಳದ ಸಂಸ್ಥಾಪಕ ಪ್ರಕಾಶ್ ಸಿಂಗ್ ಬಾದಲ್ ಅವರ ಅಂತ್ಯಕ್ರಿಯೆ ಇಂದು ಅವರ ಸ್ವಗ್ರಾಮದಲ್ಲಿ ನಡೆಯಲಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಪಂಜಾಬ್​ನ ಮಾಜಿ ಮುಖ್ಯಮಂತ್ರಿ ಎಸ್ ಪ್ರಕಾಶ್ ಸಿಂಗ್ ಬಾದಲ್ (95) ಅವರು ಏಪ್ರಿಲ್ 25 ರಂದು ಇಲ್ಲಿಯ ಮೊಹಾಲಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಇಂದು ಬೆಳಗ್ಗೆನಿಂದ ಪ್ರಕಾಶ್ ಸಿಂಗ್ ಬಾದಲ್ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ಈಗಾಗಲೇ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಪಾರ್ಥಿವ ಶರೀರವನ್ನು ಮನೆಯಿಂದ ಜಮೀನಿಗೆ (ಅಲ್ಲಿ ಅಂತಿಮ ವಿಧಿವಿಧಾನಗಳು) ಟ್ರ್ಯಾಕ್ಟರ್‌ನಲ್ಲಿ ತೆಗೆದುಕೊಂಡು ಹೋಗಲಾಗುವುದು. ಈ ಟ್ರಾಕ್ಟರ್ ಅನ್ನು ಹೂವುಗಳಿಂದ ಅಲಂಕರಿಸಲಾಗಿದ್ದು, ಅದರ ಮೇಲೆ ಫಖ್ರ್-ಎ-ಕ್ವಾಮ್ ಎಂದು ಬರೆಯಲಾಗಿದೆ.

ಇನ್ನು ಪ್ರಕಾಸ್​ ಸಿಂಗ್​ ಅವರ ಅಂತ್ಯಕ್ರಿಯೆಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಇಂದು ಬಾದಲ್ ಗ್ರಾಮಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಲಿದ್ದಾರೆ. ಇದಲ್ಲದೇ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್, ಜೆಪಿ ನಡ್ಡಾ ಕೂಡ ಆಗಮಿಸಲಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಪ್ರಕಾಶ್ ಸಿಂಗ್ ಬಾದಲ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸುಖಬೀರ್ ಬಾದಲ್ ಕಣ್ಣೀರು: ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಅಂತಿಮ ಯಾತ್ರೆಯಲ್ಲಿ ಬೆಂಬಲಿಗರು ಪುಷ್ಪವೃಷ್ಟಿ ಮಾಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಸುಖಬೀರ್ ಬಾದಲ್ ಅವರು ಕಣ್ಣೀರು ಹಾಕುತ್ತಿರುವುದು ಕಂಡು ಬಂತು.

ರಾಜಕೀಯ ವೃತ್ತಿಜೀವನ: ಪ್ರಕಾಶ್ ಸಿಂಗ್ ಬಾದಲ್ ಪಂಜಾಬ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು 1970-1971, 1977-1980, 1997-2002 ಮತ್ತು 2007-2017 ವರೆಗೆ ಪಂಜಾಬ್​ನ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಪಂಜಾಬ್ ರಾಜ್ಯದಲ್ಲಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ಮುಖ್ಯಮಂತ್ರಿ ಎಂಬ ಖ್ಯಾತಿಯು ಇವರ ಹೆಸರಿನಲ್ಲಿದೆ. 1947 ರಲ್ಲಿಯೇ ರಾಜಕೀಯ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ್ದರು.

ಅಂತಿಮ ನಮನ ಸಲ್ಲಿಸಿದ ಪ್ರಧಾನಿ:ಪಂಜಾಬ್​ನ 5 ಬಾರಿಯ ಮುಖ್ಯಮಂತ್ರಿ, ಶಿರೋಮಣಿ ಅಕಾಲಿದಳದ ಹಿರಿಯ ರಾಜಕಾರಣಿ ಪ್ರಕಾಶ್ ಸಿಂಗ್ ಬಾದಲ್ (95) ಅವರಿಗೆ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿನ ನಮನ ಸಲ್ಲಿಸಿದರು. ಚಂಡೀಗಢಕ್ಕೆ ಆಗಮಿಸಿದ ಪ್ರಧಾನಿ ಬಾದಲ್​ರ ಅಂತಿಮ ದರ್ಶನ ಪಡೆದರು.

ರಾಷ್ಟ್ರೀಯ ಶೋಕಾಚರಣೆ:ದೇಶದ ಹಿರಿಯ ರಾಜಕಾರಣಿಯಾಗಿದ್ದ ಪ್ರಕಾಶ್ ಸಿಂಗ್ ಬಾದಲ್ ನಿಧನಕ್ಕೆ ಸಂತಾಪ ಸೂಚಿಸಲು ಕೇಂದ್ರ ಸರ್ಕಾರ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಿದೆ. ದೇಶಾದ್ಯಂತ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ಎಲ್ಲ ಸರ್ಕಾರಿ ಮನರಂಜನಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

ಪಂಜಾಬ್‌ನಲ್ಲಿ ಇಂದು ರಜೆ:ಬಾದಲ್ ನಿಧನದ ಶೋಕಾಚರಣೆಯ ಹಿನ್ನೆಲೆಯಲ್ಲಿ ಇಂದು ರಾಜ್ಯದಲ್ಲಿ ರಜೆ ಘೋಷಿಸಲಾಗಿದೆ. ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಶಿಕ್ಷಣ ಸಂಸ್ಥೆಗಳು, ಕಚೇರಿಗಳಿಗೆ ರಜೆ ನೀಡಲಾಗಿದೆ. ಜಲಂಧರ್ ಲೋಕಸಭಾ ಉಪಚುನಾವಣೆ ಘೋಷಣೆಯಾಗಿದ್ದು, ತಯಾರಿಯಲ್ಲಿದ್ದ ರಾಜಕೀಯ ಪಕ್ಷಗಳಲ್ಲಿ ಶಿರೋಮಣಿ ಅಕಾಲಿದಳವು ಎರಡು ದಿನಗಳ ಚುನಾವಣಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ. ಬಿಜೆಪಿ ಒಂದು ದಿನದ ಕಾರ್ಯಕ್ರಮಗಳನ್ನು ಕೈಬಿಟ್ಟಿದೆ.

ಓದಿ:ಪ್ರಕಾಶ್​ ಸಿಂಗ್​ ಬಾದಲ್​ ಪಾದಮುಟ್ಟಿ ನಮಸ್ಕರಿಸಿದ್ದ ಮೋದಿ : ಹಳೆ ಫೋಟೋ ವೈರಲ್​​

ABOUT THE AUTHOR

...view details