ನವದೆಹಲಿ: ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಬಜೆಟ್ಗೂ ಮೊದಲು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಜನವರಿ 31 ರಂದು ಈ ಸಭೆ ವರ್ಚುಯಲ್ ಮೂಲಕ ನಡೆಯಲಿದೆ. ಸುಗಮ ಕಲಾಪಗಳು ನಡೆಯುವಂತೆ ಎಲ್ಲ ಪಕ್ಷಗಳ ಸಹಕಾರವನ್ನು ಕೇಂದ್ರ ಸಚಿವರು ಈ ವೇಳೆ ಕೋರಲಿದ್ದಾರೆ.
ಫೆಬ್ರವರಿ 1 ರಂದೇ ಬಜೆಟ್ ಮಂಡನೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ಮಹತ್ವ ಪಡೆದುಕೊಂಡಿದೆ. ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಸಂಸತ್ ಕಲಾಪ ಸುಗಮವಾಗಿ ನಡೆಯುಂತಾಗಲು ಎಲ್ಲರ ಸಹಕಾರ ಅಗತ್ಯ ಇದೆ. ಈ ಬಗ್ಗೆ ಚರ್ಚಿಸುವ ಉದ್ದೇಶದಿಂದ ಎಲ್ಲ ರಾಜಕೀಯ ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ