ನವದೆಹಲಿ:ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 18 ರಿಂದ ಆಗಸ್ಟ್ 12 ರವರೆಗೆ ನಡೆಯುವ ಸಾಧ್ಯತೆಯಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಅಧಿವೇಶನ ನಡೆಸಲು ಶಿಫಾರಸು ಮಾಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈ ಅಧಿವೇಶನವು 17 ದಿನಗಳ ಕಾಲ ನಡೆಯಲಿದೆ. ಇದರ ನಡುವೆಯೇ ರಾಷ್ಟ್ರಪತಿ, ಉಪರಾಷ್ಟ್ರಪತಿ ಆಯ್ಕೆಗೆ ಚುನಾವಣೆಯೂ ನಡೆಯಲಿದೆ. ಆದರೆ, ಚುನಾವಣಾ ಆಯೋಗ ಈಗಾಗಲೇ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ಘೋಷಿಸಿದ್ದು, ಉಪರಾಷ್ಟ್ರಪತಿ ಚುನಾವಣೆಗೆ ಮುಹೂರ್ತ ನಿಗದಿ ಮಾಡಿಲ್ಲ.