ಕರ್ನಾಟಕ

karnataka

ETV Bharat / bharat

ಸಂಸತ್ತಿನ ಚಳಿಗಾಲದ ಅಧಿವೇಶನ ಒಂದು ವಾರ ಮುಂಚಿತವಾಗಿಯೇ ಮುಕ್ತಾಯ? - ಕ್ರಿಸ್‌ಮಸ್

ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ನಡೆದ ಲೋಕಸಭೆಯ ವ್ಯವಹಾರ ಸಲಹಾ ಸಮಿತಿಯ ಸಭೆಯಲ್ಲಿ ಒಂದು ವಾರ ಮುಂಚಿತವಾಗಿಯೇ ಅಧಿವೇಶನ ಮುಕ್ತಾಯಗೊಳಿಸುವ ಬಗ್ಗೆ ಶಿಫಾರಸು ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

parliaments-winter-session-may-end-on-december-23-2022-instead-of-29
ಸಂಸತ್ತಿನ ಚಳಿಗಾಲದ ಅಧಿವೇಶನ ಒಂದು ವಾರ ಮುಂಚಿತವಾಗಿಯೇ ಮುಕ್ತಾಯ?arat

By

Published : Dec 20, 2022, 3:01 PM IST

ನವದೆಹಲಿ:ಸಂಸತ್ತಿನ ಚಳಿಗಾಲದ ಅಧಿವೇಶನವು ನಿಗದಿತ ಅವಧಿಗಿಂತ ಒಂದು ವಾರ ಮುಂಚಿತವಾಗಿಯೇ ಮುಕ್ತಾಯಗೊಳ್ಳುವ ಸಾಧ್ಯತೆಯಿದೆ. ಡಿಸೆಂಬರ್ 29ರಂದು ಕೊನೆಗೊಳ್ಳಬೇಕಿದ್ದ ಅಧಿವೇಶನವು ಡಿಸೆಂಬರ್ 23ರಂದು ಅಂತ್ಯವಾಗಲಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ.

ಒಂದು ವಾರ ಮುಂಚಿತವಾಗಿಯೇ ಅಧಿವೇಶನ ಮುಕ್ತಾಯಗೊಳಿಸುವ ಬಗ್ಗೆ ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ನಡೆದ ಲೋಕಸಭೆಯ ವ್ಯವಹಾರ ಸಲಹಾ ಸಮಿತಿಯ ಸಭೆಯಲ್ಲಿ ಶಿಫಾರಸು ಮಾಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಡಿ.7ರಿಂದ ಆರಂಭವಾಗಿರುವ ಚಳಿಗಾಲದ ಅಧಿವೇಶನವು ಡಿ.29ರಂದು ಕೊನೆಗೊಳ್ಳಬೇಕಿತ್ತು. ಆದರೆ, ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಹಿನ್ನೆಲೆಯಲ್ಲಿ ಡಿ.23ರಂದೇ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲು ಲೋಕಸಭೆಯ ವ್ಯವಹಾರ ಸಲಹಾ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ನಿರ್ಧಾರ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ:'ನಾಯಿ' ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ; ಕ್ಷಮೆಯಾಚಿಸಲ್ಲ ಎಂದ ಖರ್ಗೆ

ABOUT THE AUTHOR

...view details