ಬಾಲಸೋರ್(ಒಡಿಶಾ):ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ವೊಂದು ಟ್ರಕ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಲಸೋರ್ ಜಿಲ್ಲೆಯ ಸೊರೊ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.
ಪ್ರಯಾಣಿಕರಿದ್ದ ಬಸ್ವೊಂದು ಒಡಿಶಾದ ಉಡಾಲಾದಿಂದ ಭುವನೇಶ್ವರಕ್ಕೆ ತೆರಳುತ್ತಿತ್ತು. ಈ ವೇಳೆ, ಸೊರೊ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಟ್ರಕ್ಗೆ ಡಿಕ್ಕಿ ಹೊಡೆದು, ಪಲ್ಟಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.