ನವದೆಹಲಿ:ಕೇರಳ ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ನ ಹಿರಿಯ ಮುಖಂಡ ಪಿಸಿ ಚಾಕೊ ಪಕ್ಷಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದು, ಕಾಂಗ್ರೆಸ್ನಲ್ಲಿ ಯಾವುದೇ ರೀತಿಯ ಪ್ರಜಾಪ್ರಭುತ್ವ ಉಳಿದಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಮುಂದಿನ ತಿಂಗಳು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದರ ಬೆನ್ನಲ್ಲೇ ಚಾಕೊ ತೆಗೆದುಕೊಂಡಿರುವ ನಿರ್ಧಾರ ಕೈ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಲಿದೆ. ಜತೆಗೆ ಸ್ವತಃ ಪಕ್ಷದ ಮೇಲೆ ಅವರು ಗಂಭೀರ ಆರೋಪ ಮಾಡಿರುವುದು ಬರುವ ಚುನಾವಣೆಯಲ್ಲಿ ಕಪ್ಪು ಚುಕ್ಕೆಯಾಗಲಿದೆ.
ಕೇರಳ ಕಾಂಗ್ರೆಸ್ ಸ್ಥಿತಿ ಗಂಭೀರವಾಗಿದ್ದು, ಅಲ್ಲಿ ಪ್ರಜಾಪ್ರಭುತ್ವದ ಬದಲಿಗೆ ಗುಂಪುಗಾರಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ಗೆ ನಾನು ಮಾಹಿತಿ ನೀಡಿದ್ರೂ, ಪ್ರಯೋಜನವಾಗಿಲ್ಲ. ಹೈಕಮಾಂಡ್ ಕೂಡ ಅದಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.