ನವದೆಹಲಿ: ಪೆಗಾಸಸ್ ಸ್ಪೈವೇರ್ ಮೂಲಕ ಗೂಢಚರ್ಯೆ ದೇಶದ ಭದ್ರತೆಗೆ ಸಂಬಂಧಿಸಿದ ಅತ್ಯಂತ ಗಂಭೀರವಾದ ವಿಚಾರವಾಗಿದೆ. ಈ ಬಗ್ಗೆ ಸರ್ಕಾರ ವಿವರಣೆ ನೀಡಬೇಕು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಭಾರತದಲ್ಲಿ ಫೋನ್‌ಗಳನ್ನು ಪರೀಕ್ಷಿಸಿರುವುದು ಪೆಗಾಸಸ್‌ನ ಆಕ್ರಮಣ ನೀತಿ ಎಂಬುದು ಸಾಬೀತಾಗಿದೆ. ಈ ಡೇಟಾವನ್ನು ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡಲಾಗುತ್ತದೆ. ಆದ್ರೆ ಯಾವ ಸರ್ಕಾರಗಳಿಗೆ ನೀಡಲಾಗಿತ್ತು ಎಂಬ ಪ್ರಶ್ನೆ ಉದ್ಭವಿಸುತ್ತದೆ. ನಾವು ಇದನ್ನು ಮಾಡಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದರೆ ಇದು ರಾಷ್ಟ್ರೀಯ ಭದ್ರತೆಯ ವಿಷಯದಲ್ಲಿ ಮತ್ತಷ್ಟು ಗಂಭೀರವಾಗಲಿದೆ ಎಂದು ತರೂರ್ ಹೇಳಿದ್ದಾರೆ.
ಈ ರೀತಿ ಸರ್ಕಾರಕ್ಕೆ ಮಾಡಲು ಅಧಿಕಾರ ಇದೆಯೇ, ರಾಷ್ಟ್ರೀಯ ಭದ್ರತೆ ಮತ್ತು ಭಯೋತ್ಪಾದನೆಯ ವಿಷಯಗಳಿಗೆ ಸಂವಹನದ ಪ್ರತಿಬಂಧವನ್ನು ಕಾನೂನು ಮಾತ್ರ ಅನುಮತಿಸುವುದರಿಂದ ಸರ್ಕಾರ ಈ ಬಗ್ಗೆ ವಿವರಣೆ ನೀಡಬೇಕಾಗಿದೆ. ಇಲ್ಲದಿದ್ದರೆ ಅದು ಕಾನೂನುಬಾಹಿರವಾಗಿದೆ. ತನಿಖೆಯಲ್ಲಿ ಸರ್ಕಾರ ಸಹಕರಿಸುವುದು ಅತ್ಯಗತ್ಯ ಎಂದಿದ್ದಾರೆ.