ಆಂಧ್ರಪ್ರದೇಶ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಎಲೂರು ಪಟ್ಟಣದಲ್ಲಿ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದ್ದ ಸುಮಾರು 345 ಮಂದಿ ಪೈಕಿ 180 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸ್ವಸ್ಥರನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಘಟನೆಗೆ ಕಾರಣವೇನೆಂದು ಶೀಘ್ರ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.