ಕರ್ನಾಟಕ

karnataka

ETV Bharat / bharat

ಪವಿತ್ರ ಗಂಗಾನದಿಯಲ್ಲಿ ಮಿಂದೇಳುತ್ತಿರುವ ಭಕ್ತರು: ಪೊಂಗಲ್ ಆಚರಿಸಿದ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ - ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್

ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ರಾಜ್ ನಿವಾಸದ ಹುಲ್ಲುಹಾಸಿನ ಮೇಲೆ ಪೊಂಗಲ್ ಹಬ್ಬವನ್ನು ಸರಳವಾಗಿ ಆಚರಿಸಿದರು.

ಪವಿತ್ರ ಗಂಗಾನದಿಯಲ್ಲಿ ಮಿಂದೇಳುತ್ತಿರುವ ಭಕ್ತರು
ಪವಿತ್ರ ಗಂಗಾನದಿಯಲ್ಲಿ ಮಿಂದೇಳುತ್ತಿರುವ ಭಕ್ತರು

By

Published : Jan 14, 2022, 7:08 AM IST

ಕೋಲ್ಕತ್ತಾ/ ಪುದುಚೇರಿ: ದೇಶಾದ್ಯಂತ ಹೊಸ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಇಂದು ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಿನ್ನೆ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ರಾಜ್ ನಿವಾಸದ ಹುಲ್ಲುಹಾಸಿನ ಮೇಲೆ ಪೊಂಗಲ್ ಹಬ್ಬವನ್ನು ಸರಳವಾಗಿ ಆಚರಿಸಿದರು.

ಸಂಕ್ರಾಂತಿ, ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬವಾಗಿದ್ದು, ತಮಿಳುನಾಡಿನಲ್ಲಿ ಈ ಹಬ್ಬವನ್ನು "ಪೊಂಗಲ್" ಎಂದು ಕರೆಯಲಾಗುತ್ತದೆ. ತಮಿಳಿಸೈ ಸೌಂದರರಾಜನ್ ಪಾಲ್ಗೊಂಡ ಈ ಹಬ್ಬದಲ್ಲಿ ಮುಖ್ಯಮಂತ್ರಿ ಎನ್ ರಂಗಸಾಮಿ ಜಿ. ಸೇರಿದಂತೆ ಅವರ ಸಂಪುಟ ಸಹೋದ್ಯೋಗಿಗಳು ಭಾಗವಹಿಸಿದ್ದರು.

ಗಂಗಾ ಸ್ನಾನ:ಮಕರ ಸಂಕ್ರಾಂತಿಯಂದು ಜನರು ಗಂಗಾ ನದಿದಲ್ಲಿ ಪವಿತ್ರ ಸ್ನಾನ ಮಾಡುತ್ತಾರೆ. ಸನಾತನ ಧರ್ಮದಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಸೂರ್ಯನು ಮಕರ ರಾಶಿಗೆ ಪ್ರವೇಶಿಸಿದ ಕೂಡಲೇ ಕರ್ಮಗಳೂ ಮುಗಿದು ಶುಭ ಕಾರ್ಯಗಳು ಮತ್ತೆ ಪ್ರಾರಂಭವಾಗುತ್ತವೆ.

ಈ ದಿನದಂದು ಪವಿತ್ರ ಗಂಗಾನದಿಯಲ್ಲಿ ಸ್ನಾನ ಮಾಡುವುದು ವಿಶೇಷ ಮಹತ್ವವನ್ನು ಹೊಂದಿದೆ. ಹೀಗೆ ಮಾಡುವುದರಿಂದ ಮೋಕ್ಷ ಪ್ರಾಪ್ತಿಯಾಗುತ್ತದೆ ಮತ್ತು ಅಕ್ಷಯ ಪುಣ್ಯದ ಫಲ ಸಿಗುತ್ತದೆ ಎಂಬುದು ನಂಬಿಕೆ. ಆದ್ದರಿಂದ ಇಂದು ಭಕ್ತರು ಗಂಗಾ ನದಿದಲ್ಲಿ ಪವಿತ್ರ ಸ್ನಾನ ಮಾಡುತ್ತಿದ್ದಾರೆ.

ಇದನ್ನೂ ಓದಿ:ನಾಡಿನಾದ್ಯಂತ ಸಂಕ್ರಾಂತಿ ಸಂಭ್ರಮ; ಹಬ್ಬದ ಮಹತ್ವ, ಆಚರಣೆ ಹೀಗಿದೆ...

ABOUT THE AUTHOR

...view details