ಮುಂಬೈ: ಇಂದೂ ಕೂಡ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ 31 ರಿಂದ 36 ಪೈಸೆ ಹಾಗೂ ಡೀಸೆಲ್ ಮೇಲೆ 33 ರಿಂದ 37 ಪೈಸೆಯನ್ನು ತೈಲ ಕಂಪನಿಗಳು ಹೆಚ್ಚಿಸಿವೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 35 ಪೈಸೆ ಏರಿಕೆಯೊಂದಿಗೆ ಲೀಟರ್ ಪೆಟ್ರೋಲ್ ದರ 108.99 ರೂ. ಹಾಗೂ 35 ಪೈಸೆ ಹೆಚ್ಚಳದೊಂದಿಗೆ ಡೀಸೆಲ್ ದರ 97.72 ರೂ.ಗೆ ಏರಿಕೆಯಾಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 112.79 ಹಾಗೂ ಡೀಸೆಲ್ ದರ 103.72 ರೂ.ಗೆ ಏರಿಕೆಯಾಗಿದೆ.