ನವದೆಹಲಿ:ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮುಂದುವರಿದಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಸೋಮವಾರ ಎರಡೂ ಇಂಧನಗಳ ದರವನ್ನು ಪ್ರತಿ ಲೀಟರ್‌ಗೆ ತಲಾ 40 ಪೈಸೆಯಷ್ಟು ಏರಿಸಿವೆ.
ಪ್ರಮುಖ ಮಹಾನಗರಗಳಲ್ಲಿ ಇಂದಿನ ದರ:ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 40 ಪೈಸೆ ಹೆಚ್ಚಾಗಿದೆ. ಇದರೊಂದಿಗೆ ಪ್ರತಿ ಲೀಟರ್ ಪೆಟ್ರೋಲ್ 103.81 ರೂ ಮತ್ತು ಡೀಸೆಲ್ 95.07 ರೂ.ಗೆ ತಲುಪಿದೆ. ಮುಂಬೈನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 118.83 ರೂ. ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 103.07 ರೂ.ಗೆ ತಲುಪಿದೆ. ಚೆನ್ನೈನಲ್ಲಿ ಪೆಟ್ರೋಲ್ ಲೀಟರ್‌ಗೆ 109.34 ರೂ. ಹಾಗೂ ಡೀಸೆಲ್ ಲೀಟರ್‌ಗೆ 99.42 ರೂ.
ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 109.41 ರೂ. ಮತ್ತು ಡೀಸೆಲ್ ದರ 93.23 ರೂ.ಗೆ ತಲುಪಿದೆ. ಸ್ಥಳೀಯ ಮಾರಾಟ ತೆರಿಗೆ ಮತ್ತು ಸಾಗಣೆ ವೆಚ್ಚಕ್ಕೆ ಅನುಗುಣವಾಗಿ ಮಾರಾಟ ದರವು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತದೆ. ದೇಶದ ನಾಲ್ಕು ಮಹಾನಗರಗಳನ್ನು ಹೋಲಿಸಿದರೆ, ಮುಂಬೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅತ್ಯಂತ ದುಬಾರಿಯಾಗಿದೆ. ದೆಹಲಿ ಹೊರತುಪಡಿಸಿ, ಎಲ್ಲಾ ಪ್ರಮುಖ ಮಹಾನಗರಗಳಲ್ಲಿ ಡೀಸೆಲ್ ಲೀಟರ್‌ಗೆ 100 ರೂ.ಯಿಗಿಂತ ಹೆಚ್ಚು ಮಾರಾಟವಾಗುತ್ತಿದೆ.