ನವದೆಹಲಿ:ದೇಶದ ಕೆಲವೊಂದು ನಗರಗಳಲ್ಲಿ ಪೆಟ್ರೋಲ್ ಬೆಲೆ 100ರ ಗಡಿ ದಾಟಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಹನ ಸವಾರರು ಹರಿಹಾಯುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಹಿಂದಿನ ಸರ್ಕಾರದ ಮೇಲೆ ಗೂಬೆ ಕೂರಿಸಿದ್ದಾರೆ.
ಹಿಂದಿನ ಸರ್ಕಾರಗಳು ಭಾರತದ ಇಂಧನ ಆಮುದು ಅವಲಂಬನೆಯನ್ನ ಕಡಿಮೆ ಮಾಡುವತ್ತ ಗಮನಹರಿಸಿದ್ದರೆ, ಇಂದು ಈ ಸಮಸ್ಯೆ ಉದ್ಭವವಾಗುತ್ತಿರಲಿಲ್ಲ ಎಂದಿರುವ ಅವರು, ಮಧ್ಯಮ ವರ್ಗದವರ ಮೇಲೆ ಹೊರೆಯಾಗುತ್ತಿರಲಿಲ್ಲ ಎಂದಿದ್ದಾರೆ. ನಾನು ಯಾರನ್ನೂ ಟೀಕಿಸಲು ಬಯಸುವುದಿಲ್ಲ. ಆದರೆ ಈ ವಿಷಯದ ಬಗ್ಗೆ ಮೊದಲೇ ಗಮನಹರಿಸಿದ್ದರೆ ಮಧ್ಯಮ ವರ್ಗದವರಿಗೆ ಹೊರೆಯಾಗುತ್ತಿರಲಿಲ್ಲ ಎಂದು ನಮೋ ತಮಿಳುನಾಡಿನ ತೈಲ ಮತ್ತು ಅನಿಲ ಯೋಜನೆ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಹೇಳಿದ್ದಾರೆ.