ಡೆಹ್ರಾಡೂನ್ (ಉತ್ತರಾಖಂಡ) :ತೈಲ ಬೆಲೆ ಏರಿಕೆ ಸಂಬಂಧ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದೇಶಿ ತುಪ್ಪಕ್ಕಿಂತ ಹೆಚ್ಚಾಗಿದೆ ಎಂದಿದ್ದಾರೆ.
ಡೆಹ್ರಾಡೂನ್ನಲ್ಲಿ ಉತ್ತರಾಖಂಡ ಕಾಂಗ್ರೆಸ್ ರಾಜ್ಯಾಧ್ಯಕ್ಷ ಪ್ರೀತಂ ಸಿಂಗ್ ಜೊತೆ ಶುಕ್ರವಾರ ಜಂಟಿ ಮಾಧ್ಯಮಗೋಷ್ಟಿ ನಡೆಸಿ ಅವರು ಮಾತನಾಡಿದರು. ದೇಶದಲ್ಲಿ 2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಜನ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಪ್ರಮುಖವಾದದ್ದು. ರಾಜಸ್ಥಾನದಲ್ಲಿ ಹಿರಿಯ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಅವರು, ಪೆಟ್ರೋಲ್, ಡೀಸೆಲ್ ಬೆಲೆ ದೇಸಿ ತುಪ್ಪಕ್ಕಿಂತ ಹೆಚ್ಚಳವಾಗಿದೆ ಎನ್ನುತ್ತಿದ್ದಾರೆ ಎಂದು ಪೈಲಟ್ ಹೇಳಿದರು.