ನವದೆಹಲಿ:ಪಂಚರಾಜ್ಯ ಚುನಾವಣೆ ಬಳಿಕ ತೈಲ ಬೆಲೆಗಳಲ್ಲಿ ಏರಿಕೆಯಾಗಿದ್ದರಿಂದ ವಾಹನ ಸವಾರರು ಇನ್ನಿಲ್ಲದ ಸಮಸ್ಯೆ ಅನುಭವಿಸುವಂತಾಗಿತ್ತು. ಇದೀಗ, ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಬಿಗ್ ರಿಲೀಫ್ ನೀಡಿದ್ದು, ಪೆಟ್ರೋಲ್-ಡಿಸೇಲ್ ಮೇಲಿನ ಅಬಕಾರಿ ಸುಂಕ ಇಳಿಕೆ ಮಾಡಿದೆ. ದಿಢೀರ್ಬೆಳವಣಿಗೆವೊಂದರಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು,ಪೆಟ್ರೋಲ್ ಮೇಲೆ ಪ್ರತಿ ಲೀಟರ್ಗೆ 8 ರೂಪಾಯಿ ಹಾಗೂ ಡಿಸೇಲ್ ಮೇಲೆ 6 ರೂಪಾಯಿ ಅಬಕಾರಿ ಸುಂಕ ಇಳಿಕೆ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಟ್ವೀಟ್ ಮಾಡಿ, ಮಾಹಿತಿ ಹಂಚಿಕೊಂಡಿದ್ದಾರೆ.
ದೊಡ್ಡ ಮಟ್ಟದಲ್ಲಿ ಅಬಕಾರಿ ಸುಂಕ ಇಳಿಕೆಯಾಗಿರುವ ಕಾರಣ ವಾಹನ ಸವಾರರಿಗೆ ಇದೀಗ ಪೆಟ್ರೋಲ್ ಮೇಲೆ 9.5ರೂ ಹಾಗೂ ಡಿಸೇಲ್ 7 ರೂ ಕಡಿಮೆ ಆಗಲಿದೆ. ಈ ಮೂಲಕ ಗ್ರಾಹಕರಿಗೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಇದರ ಜೊತೆಗೆ ಆಮುದು ಪ್ಲಾಸ್ಟಿಕ್ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕ ಸಹ ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಮನೆ ಕಟ್ಟುವವರಿಗೂ ಶುಭ ಸುದ್ದಿ ನೀಡಿದೆ. ಸಿಮೆಂಟ್ ದರ ಇಳಿಕೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈ ಮೂಲಕ ಕೇಂದ್ರ ಸರ್ಕಾರ ತನ್ನ ಮೇಲಿದ್ದ ಆರೋಪಗಳಿಂದ ಮುಕ್ತವಾಗಲು ಮತ್ತು ಪ್ರತಿಪಕ್ಷಗಳನ್ನು ಕಟ್ಟಿ ಹಾಕಲು ಭಾರಿ ರಣತಂತ್ರವನ್ನೇ ರೂಪಿಸಿದಂತಿದೆ.