ಕರ್ನಾಟಕ

karnataka

ETV Bharat / bharat

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ.. ಗ್ರಾಹಕರ ಜೇಬಿಗೆ ಕತ್ತರಿ! - ಡೀಸೆಲ್ ಬೆಲೆ ಏರಿಕೆ

ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್ (ಐಜಿಎಲ್) ಕಂಪ್ರೆಸ್ಡ್ ನ್ಯಾಚುರಲ್​ ಗ್ಯಾಸ್ (ಸಿಎನ್‌ಜಿ) ದರವನ್ನು ಪ್ರತಿ ಕೆಜಿಗೆ 1 ರೂ. ಹೆಚ್ಚಿಸಿದೆ. ದೆಹಲಿಯಲ್ಲಿ ಒಂದು ಕೆಜಿ ಸಿಎನ್‌ಜಿ ಬೆಲೆ ಕೆಜಿಗೆ 59.01 ರೂ.ಗೆ ತಲುಪಿದೆ. ಐಜಿಎಲ್ ಕೂಡ ಗುರುವಾರದಿಂದ ಜಾರಿಗೆ ಬರುವಂತೆ ಪಿಎನ್‌ಜಿ ಬೆಲೆಯನ್ನು ಪ್ರತಿ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್‌ಗೆ (ಎಸ್‌ಸಿಎಂ) 1 ರೂ. ಹೆಚ್ಚಿಸಿದೆ..

Petrol diesel price hike
ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ

By

Published : Mar 25, 2022, 12:05 PM IST

ನವದೆಹಲಿ: ಈಗಾಗಲೇ ಅಗತ್ಯ ದಿನ ಬಳಕೆ ವಸ್ತುಗಳ ಬೆಲೆ ಹೆಚ್ಚಳದಿಂದಾಗಿ ಜನರು ಕಂಗೆಟ್ಟಿದ್ದಾರೆ. ದಿನೇದಿನೆ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಡುಗೆ ಅನಿಲದ ಬೆಲೆ ಏರಿಕೆ ಮಾಡಲಾಗುತ್ತಿದೆ. ಬೆಲೆ ಏರಿಕೆಯಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಮತ್ತೆ ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 80 ಪೈಸೆ ಏರಿದೆ. ದೆಹಲಿಯಲ್ಲಿಂದು ಪೆಟ್ರೋಲ್ ಲೀಟರ್​ಗೆ 97.81 ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 89.07 ರೂ. ಇದೆ.

ಮುಂಬೈನಲ್ಲಿ ಪೆಟ್ರೋಲ್ ಬೆಲೆ 84 ಪೈಸೆ ಹೆಚ್ಚಾಗಿದ್ದು, ಲೀಟರ್‌ಗೆ 112.51 ರೂ.ನಂತೆ ಮಾರಾಟವಾಗುತ್ತಿದೆ. ಡೀಸೆಲ್ ಬೆಲೆ ಲೀಟರ್‌ಗೆ 85 ಪೈಸೆ ಹೆಚ್ಚಿದ್ದು, ಇದೀಗ 96.70 ರೂ.ಗೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 76 ಪೈಸೆಯಷ್ಟು ಹೆಚ್ಚಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ದರ 103.67 ರೂ. ಮತ್ತು ಡೀಸೆಲ್ 93.71 ರೂ.ಗೆ ಮಾರಾಟವಾಗುತ್ತಿದೆ.

ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 84 ಪೈಸೆ ಹೆಚ್ಚಿದ್ದು, ಲೀಟರ್‌ಗೆ 106.34 ರೂ. ಇದೆ. 80 ಪೈಸೆ ಹೆಚ್ಚಳದ ನಂತರ ಡೀಸೆಲ್ ಬೆಲೆ ಲೀಟರ್‌ಗೆ 91.42 ರೂ. ಇದೆ. ನಾಲ್ಕು ತಿಂಗಳ ಬಳಿಕ ಬೆಲೆ ಏರಿಕೆ ಆಗುತ್ತಿದ್ದು, ನಾಲ್ಕು ದಿನಗಳಲ್ಲಿ ಇದು 3ನೇ ಹೆಚ್ಚಳವಾಗಿದೆ. ಇನ್ನೂ ಮಂಗಳವಾರ ಮತ್ತು ಬುಧವಾರದಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ ತಲಾ 80 ಪೈಸೆ ಏರಿಕೆಯಾಗಿದೆ.

ಇದನ್ನೂ ಓದಿ:ಎಲ್‌ಜಿಬಿಐ ವಿಮಾನ ನಿಲ್ದಾಣದಲ್ಲಿ 80 ವರ್ಷದ ಅಂಗವಿಕಲ ನಾಗಾ ಮಹಿಳೆಯನ್ನು ವಿವಸ್ತ್ರಗೊಳಿಸಿದ CISF ಸಿಬ್ಬಂದಿ

ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್ (ಐಜಿಎಲ್) ಕಂಪ್ರೆಸ್ಡ್ ನ್ಯಾಚುರಲ್​ ಗ್ಯಾಸ್ (ಸಿಎನ್‌ಜಿ) ದರವನ್ನು ಪ್ರತಿ ಕೆಜಿಗೆ 1 ರೂ. ಹೆಚ್ಚಿಸಿದೆ. ದೆಹಲಿಯಲ್ಲಿ ಒಂದು ಕೆಜಿ ಸಿಎನ್‌ಜಿ ಬೆಲೆ ಕೆಜಿಗೆ 59.01 ರೂ.ಗೆ ತಲುಪಿದೆ. ಐಜಿಎಲ್ ಕೂಡ ಗುರುವಾರದಿಂದ ಜಾರಿಗೆ ಬರುವಂತೆ ಪಿಎನ್‌ಜಿ ಬೆಲೆಯನ್ನು ಪ್ರತಿ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್‌ಗೆ (ಎಸ್‌ಸಿಎಂ) 1 ರೂ. ಹೆಚ್ಚಿಸಿದೆ.

ABOUT THE AUTHOR

...view details