ಕರ್ನಾಟಕ

karnataka

ETV Bharat / bharat

ಏರುತ್ತಲೇ ಇದೆ ತೈಲ​ ಬೆಲೆ: ಬೆಂಗಳೂರಲ್ಲಿ ಪೆಟ್ರೋಲ್‌ ಲೀ ₹110, ಡೀಸೆಲ್ ₹101 - today Fuel rate

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ದೇಶಾದ್ಯಂತ ಮತ್ತೆ ಏರಿಕೆ ಕಂಡಿದೆ. ಬೆಂಗಳೂರು, ಮುಂಬೈ, ಚೆನ್ನೈ ಸೇರಿದಂತೆ ಪ್ರಮುಖ ನಗರಗಳಲ್ಲಿ ತೈಲ ದರ ಎಷ್ಟಿದೆ ಎಂದು ಇಲ್ಲಿ ತಿಳಿದುಕೊಳ್ಳಿ.

Petrol, diesel prices
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ

By

Published : Oct 22, 2021, 9:07 AM IST

Updated : Oct 22, 2021, 8:36 PM IST

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇಂದೂ ಸಹ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿದ್ದು, ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್​​ ಹಾಗೂ ಡೀಸೆಲ್​ ಮೇಲೆ 35 ಪೈಸೆ ಹೆಚ್ಚಿಸಿವೆ.

ಕಳೆದ ಕೆಲ ದಿನಗಳಿಂದ ತೈಲ ಬೆಲೆ ಏರಿಕೆ ಎಗ್ಗಿಲ್ಲದೆ ಹೆಚ್ಚಳವಾಗುತ್ತಿದೆ. ನಿನ್ನೆ ಸಹ 35 ಪೈಸೆ ಹೆಚ್ಚಿಸಲಾಗಿತ್ತು. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 106.89 ರೂಪಾಯಿ ಹಾಗೂ ಡೀಸೆಲ್​ ದರ 95.62 ರೂಪಾಯಿ ಇದೆ.

ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 112.78 ಕ್ಕೆ ಹಾಗೂ ಲೀಟರ್ ಡೀಸೆಲ್ 103.63 ರೂ. ಗೆ ಮಾರಾಟವಾಗುತ್ತಿದೆ. ಕೋಲ್ಕತಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 107.44 ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 98.73 ರೂ. ಗೆ ಏರಿಕೆಯಾಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್​ಗೆ ಪೆಟ್ರೋಲ್​ಗೆ 103.92 ರೂ. ಇದ್ದು, ಲೀಟರ್ ಡೀಸೆಲ್ 99.92 ಕ್ಕೆ ಲಭ್ಯವಿದೆ.

ಭೋಪಾಲ್​ನಲ್ಲಿ 115.54 ರೂ.ಗೆ ಪೆಟ್ರೋಲ್ ಮತ್ತು 104.89 ರೂ.ಗೆ ಡೀಸೆಲ್ ಖರೀದಿಸಲಾಗುತ್ತಿದೆ. ಹೈದರಾಬಾದ್​ನಲ್ಲಿ ಸಹ ತೈಲ ಏರಿಕೆಯಿಂದ ವಾಹನ ಸವಾರರು ಕಂಗಾಲಾಗಿದ್ದು, ಲೀಟರ್‌ ಪೆಟ್ರೋಲ್​ಗೆ 111.18 ರೂ. ಹಾಗೂ ಲೀಟರ್‌ ಡೀಸೆಲ್​ಗೆ 104.32 ರೂ. ಇದೆ.

ಬೆಂಗಳೂರಿನ ತೈಲ ಬೆಲೆ:

ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 110.61 ಕ್ಕೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಡೀಸೆಲ್ ದರ 101.49 ರೂ. ಗೆ ಏರಿಕೆಯಾಗಿದೆ. ತಿರುವನಂತಪುರಂನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್​ ದರ 109.14 ರೂ. ಇದ್ದು, ಡೀಸೆಲ್ ದರ 102.77 ರೂ. ಇದೆ. ಗಾಂಧಿನಗರದಲ್ಲಿ ಲೀಟರ್‌ ಪೆಟ್ರೋಲ್​ ಬೆಲೆ 103.78 ರೂ. ಇದೆ. ಹಾಗೆಯೇ ಪ್ರತಿ ಲೀಟರ್‌ ಡೀಸೆಲ್ 103.27 ರೂ.ಗಳಿಗೆ ದೊರೆಯುತ್ತಿದೆ. ಬೆಂಗಳೂರು ಸೇರಿದಂತೆ ಅನೇಕ ನಗರಗಳಲ್ಲಿ ಡೀಸೆಲ್​ ಬೆಲೆ ನೂರರ ಗಡಿ ದಾಟಿದೆ.

ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಮತ್ತು ಹಿಂದುಸ್ತಾನ್ ಪೆಟ್ರೋಲಿಯಂ ಸೇರಿದಂತೆ ತೈಲ ಕಂಪನಿಗಳು ಅಬಕಾರಿ ಸುಂಕಗಳ ಆಧಾರದ ಮೇಲೆ ಇಂಧನ ದರವನ್ನು ಹೆಚ್ಚಿಸುತ್ತಿರುತ್ತವೆ.

Last Updated : Oct 22, 2021, 8:36 PM IST

ABOUT THE AUTHOR

...view details