ನವದೆಹಲಿ: ದೇಶದಲ್ಲಿ ಕಳೆದ ಒಂದು ತಿಂಗಳಿಂದ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ. ಈ ಹಿಂದೆ ಇಂಧನ ದರವನ್ನು ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿತ್ತು. ಇದರಿಂದ 2 ವಾರಗಳ ಅವಧಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 10 ರೂ. ಹೆಚ್ಚಾಗಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್‌ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.71ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.86 ರೂ. ಹಾಗೂ ಲೀಟರ್ ಡೀಸೆಲ್ ದರ 100.94 ರೂಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 115.12 ರೂ. ಹಾಗೂ ಡೀಸೆಲ್ ಬೆಲೆ ಲೀಟರ್‌ಗೆ 99.83 ರೂ. ಆಗಿದೆ. ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂ ಹಾಗೂ ಲೀಟರ್ ಡೀಸೆಲ್ ದರ 105.49 ರೂ.ನಿಗದಿಯಾಗಿದೆ.