ನವದೆಹಲಿ:ರಾಜಧಾನಿ ದೆಹಲಿಯ ಪಿಜಿಗಳಲ್ಲಿ(ಪೇಯಿಂಗ್ ಗೆಸ್ಟ್) ಹೆಣ್ಣುಮಕ್ಕಳು ಸುರಕ್ಷಿತವಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಕರೋಲ್ ಬಾಗ್ ಪ್ರದೇಶದಲ್ಲಿರುವ ಪಿಜಿಯಲ್ಲಿ ಸೆಕ್ಯುರಿಟಿ ಗಾರ್ಡ್ ಓರ್ವ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯವೆಸಗುತ್ತಿರುವ ಆತಂಕಕಾರಿ ವಿಡಿಯೋ ವೈರಲ್ ಆಗಿದೆ. ಘಟನೆಯ ಬೆನ್ನಲ್ಲೇ ದೆಹಲಿ ಮಹಿಳಾ ಆಯೋಗ ಪೊಲೀಸರಿಗೆ ನೋಟಿಸ್ ಜಾರಿ ಮಾಡಿ ತನಿಖೆ ನಡೆಸುವಂತೆ ಸೂಚಿಸಿ ಆಗಸ್ಟ್ 18ರೊಳಗೆ ವರದಿ ಸಲ್ಲಿಸಲು ತಿಳಿಸಿದೆ.
ಪಿಜಿಯಲ್ಲಿ ವಿದ್ಯಾರ್ಥಿನಿಯರ ಮೇಲೆ ಸೆಕ್ಯುರಿಟಿ ಗಾರ್ಡ್ ದೌರ್ಜನ್ಯ: ಸಿಸಿಟಿವಿ ವಿಡಿಯೋ - Etv bhrat kannada
ವಿದ್ಯಾರ್ಥಿನಿಯರ ಪಿಜಿಯಲ್ಲಿ ಸೆಕ್ಯುರಿಟಿ ಗಾರ್ಡ್ ದೌರ್ಜನ್ಯ ವೆಸಗಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆಗೆ ಸಂಬಂಧಿಸಿದಂತೆ ದೆಹಲಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಪ್ರೀತಿಗೆ ಅಡ್ಡಿಪಡಿಸಿದ ತಂದೆಯ ಮೇಲೆ ಸುಳ್ಳು ರೇಪ್ ಕೇಸ್ ಹಾಕಿ ಜೈಲಿಗಟ್ಟಿದ ಪುತ್ರಿ
ಪಿಜಿಯಲ್ಲಿ ನಿಯೋಜನೆಗೊಂಡಿದ್ದ ಸೆಕ್ಯುರಿಟಿ ಗಾರ್ಡ್ ಬಾಲಕಿಯರಿಗೆ ಕಿರುಕುಳ ನೀಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ತೀವ್ರವಾಗಿ ಆತಂಕಗೊಂಡ ವಿದ್ಯಾರ್ಥಿನಿಯೊಬ್ಬಳು ಆತನ ಕಪಿಮುಷ್ಟಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಮಹಿಳಾ ಆಯೋಗ ದೆಹಲಿ ಪೊಲೀಸರಿಗೆ ನೋಟಿಸ್ ಕೊಟ್ಟಿದೆ. ತಕ್ಷಣವೇ ಎಫ್ಐಆರ್ ದಾಖಲಿಸಿ ಆರೋಪಿಯನ್ನು ಬಂಧಿಸುವಂತೆಯೂ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಒತ್ತಾಯಿಸಿದ್ದಾರೆ.