ನವದೆಹಲಿ : 2-18 ವರ್ಷದೊಳಗಿನವರಿಗೆ ಕೊವಾಕ್ಸಿನ್‌ನ 2ನೇ ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗ ನಡೆಸಲು ಭಾರತ್ ಬಯೋಟೆಕ್‌ಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ನೀಡಿದ ಅನುಮತಿಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಕೆಯಾಗಿದ್ದು, ಈ ಕುರಿತು ಕೇಂದ್ರದ ನಿಲುವು ಸ್ಪಷ್ಟಪಡಿಸುವಂತೆ ಕೋರ್ಟ್ ತಿಳಿಸಿದೆ.
ಅರ್ಜಿಯ ಕುರಿತು ಜುಲೈ 15ರೊಳಗೆ ತಮ್ಮ ನಿಲುವನ್ನು ಕೋರಿ ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ಪೀಠ ಕೇಂದ್ರ ಮತ್ತು ಭಾರತ್ ಬಯೋಟೆಕ್‌ಗೆ ನೋಟಿಸ್ ಜಾರಿ ಮಾಡಿದೆ.