ನವದೆಹಲಿ: ಕೋವಿಡ್ ರೋಗಿಗಳಿಗೆ ಚಿಕಿತ್ಸೆಗೆ ಬಳಸುವ ರೆಮ್ಡಿಸಿವಿರ್ ಚುಚ್ಚುಮದ್ದುಗಳನ್ನು ರಾಜಕಾರಣಿಗಳು ಅಪಾರ ಪ್ರಮಾಣದಲ್ಲಿ ಸಂಗ್ರಹಿಸಿಟ್ಟುಕೊಂಡಿರುವ ಆರೋಪದಡಿ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿ ದೆಹಲಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಕೆಯಾಗಿದೆ.
ಔಷಧಿ ಸಿಗದೆ ಜನರು ಪರದಾಡುತ್ತಿರುವ ಪರಿಸ್ಥಿತಿಯಿರುವಾಗ ರಾಜಕಾರಣಿಗಳು ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆಯಡಿ ಅನುಮತಿ ಪಡೆಯದೆ ಹೇಗೆ ರೆಮ್ಡಿಸಿವಿರ್ ಸಂಗ್ರಹಿಸಿ, ವಿತರಿಸಲು ಸಮರ್ಥರಾಗಿದ್ದಾರೆ ಎಂದು ಪಿಐಎಲ್ನಲ್ಲಿ ಪ್ರಶ್ನಿಸಲಾಗಿದೆ. ಈ ಬಗ್ಗೆ ಎಫ್‌ಐಆರ್ ದಾಖಲಿಸಿಕೊಂಡು, ಸೂಕ್ತ ತನಿಖೆಯಾಗಬೇಕೆಂದು ಕೋರಲಾಗಿದೆ.
ಇದನ್ನೂ ಓದಿ:ನಕಲಿ ರೆಮ್ಡಿಸಿವಿರ್ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್