ನವದೆಹಲಿ:ಬಿಜೆಪಿ ಮುಖಂಡ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ರಾಜ್ಯಸಭೆಯ ನಾಯಕರಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಆಡಳಿತ ಪಕ್ಷ ಮೇಲ್ಮನೆಯಲ್ಲಿ ವಿಪಕ್ಷಗಳನ್ನು ಪಿಯೂಷ್ ಗೋಯೆಲ್ ಮೂಲಕ ಎದುರಿಸಲಿದೆ.
ಆಡಳಿತಾರೂಢ ಬಿಜೆಪಿಗೆ ಮೇಲ್ಮನೆಯಲ್ಲಿ ಬಹುಮತವಿಲ್ಲದ ಕಾರಣದಿಂದ ರಾಜಕೀಯವಾಗಿ ಹೆಚ್ಚು ಸವಾಲುಗಳು ಪಿಯೂಷ್ ಗೋಯಲ್ರಿಗೆ ಎದುರಾಗಲಿವೆ ಎಂದು ಹೇಳಲಾಗುತ್ತಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಆದೇಶ ಹೊರಡಿಸಿದ್ದು, ಜೊತೆಗೆ ಪಿಯೂಷ್ ಗೋಯಲ್ ಅವರನ್ನು ಅಭಿನಂದಿಸಿದ್ದಾರೆ.
ಈ ಮೊದಲು ಥಾವರ್ಚಂದ್ ಗೆಹ್ಲೋಟ್ ಮೇಲ್ಮನೆಯಲ್ಲಿ ವಿಪಕ್ಷ ನಾಯಕನ ಸ್ಥಾನವನ್ನು ನಿರ್ವಹಣೆ ಮಾಡುತ್ತಿದ್ದರು. ಆದರೆ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕ ರಾಜ್ಯದ ರಾಜ್ಯಪಾಲರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಆ ಸ್ಥಾನಕ್ಕೆ ಮೇಲ್ಮನೆಯ ಉಪನಾಯಕನಾಗಿದ್ದ ಪಿಯೂಷ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.