ಕರ್ನಾಟಕ

karnataka

ETV Bharat / bharat

12ನೇ ತರಗತಿ ಪರೀಕ್ಷೆ ರದ್ದು ಕೋರಿ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಕೆ - ಆನ್​​ಲೈನ್​ನಲ್ಲಿಯೇ ಪರೀಕ್ಷೆ

ಸಿಬಿಎಸ್​ಇ ಮತ್ತು ಸಿಐಎಸ್​​​ಸಿಇ ಬೋರ್ಡ್​ಗಳು ನಿರ್ದಿಷ್ಟ ಸಮಯದೊಳಗೆ ಫಲಿತಾಂಶ ಘೋಷಿಸಲು ಮುಂದಾಗಬೇಕು. ಇಲ್ಲದಿದ್ದರೆ ಇದು ಸುಮಾರು 12 ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

12ನೇ ತರಗತಿ ಪರೀಕ್ಷೆ ರದ್ದು ಕೋರಿ ಸುಪ್ರೀಂಕೋರ್ಟ್​​ನಲ್ಲಿ ಸರ್ಜಿ ಸಲ್ಲಿಕೆ
12ನೇ ತರಗತಿ ಪರೀಕ್ಷೆ ರದ್ದು ಕೋರಿ ಸುಪ್ರೀಂಕೋರ್ಟ್​​ನಲ್ಲಿ ಸರ್ಜಿ ಸಲ್ಲಿಕೆ

By

Published : May 14, 2021, 7:55 PM IST

Updated : May 14, 2021, 8:27 PM IST

ನವದೆಹಲಿ: 12ನೇ ತರಗತಿಯ ಪರೀಕ್ಷೆ ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್​​ಗೆ ಶುಕ್ರವಾರ ಅರ್ಜಿ ಸಲ್ಲಿಕೆಯಾಗಿದೆ.

ವಕೀಲೆ ಮಮತಾ ಶರ್ಮಾ ಎಂಬುವವರು ಅರ್ಜಿ ಸಲ್ಲಿಸಿದ್ದು, ಕೊರೊನಾ ಸಂಕಷ್ಟ ಕಾಲದಲ್ಲಿ 12ನೇ ತರಗತಿ ಕೆಲ ವಿದ್ಯಾರ್ಥಿಗಳು ನನ್ನನ್ನು ಸಂಪರ್ಕಿಸಿ ಪರೀಕ್ಷೆ ಕುರಿತು ಹಲವು ಸಮಸ್ಯೆಗೆ ಬಗ್ಗೆ ಚರ್ಚಿಸಿದ್ದಾರೆ. ಹೀಗಾಗಿ ಅವರ ಪರವಾಗಿ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದೇನೆ ಎಂದಿದ್ದಾರೆ.

ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾಲದಲ್ಲಿ 12ನೇ ತರಗತಿಯ ಪರೀಕ್ಷೆ ನಡೆಸಲು ಸಾಧ್ಯವಿಲ್ಲ. ಅಲ್ಲದೇ ಈ ವೇಳೆ ಆನ್​​ಲೈನ್​ನಲ್ಲಿಯೇ ಪರೀಕ್ಷೆ ನಡೆಸುವುದು ಸಹ ಕಷ್ಟಸಾಧ್ಯ. ಅಷ್ಟೇ ಅಲ್ಲ 12ನೇ ತರಗತಿ ಫಲಿತಾಂಶ ಘೋಷಣೆಯಲ್ಲಿ ವಿಳಂಬವಾದರೆ ವಿದೇಶಿ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಇನ್ನು ಸಿಬಿಎಸ್​ಇ ಮತ್ತು ಸಿಐಎಸ್​​​ಸಿಇ ಬೋರ್ಡ್​ಗಳು ನಿರ್ದಿಷ್ಟ ಸಮಯದೊಳಗೆ ಫಲಿತಾಂಶ ಘೋಷಿಸಲು ಮುಂದಾಗಬೇಕು. ಇಲ್ಲದಿದ್ದರೆ ಇದು ಸುಮಾರು 12 ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಲಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳು ಉಲ್ಬಣವಾಗುತ್ತಿರುವುದರಿಂದ ಈ ಮೊದಲು ಮೇ 4 ರಿಂದ ಜೂನ್ 14ರ ವರೆಗೆ ನಿಗದಿಯಾಗಿದ್ದ 12ನೇ ತರಗತಿಯ ಸಿಬಿಎಸ್‌ಇ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಇದನ್ನೂ ಓದಿ:'ಮತ್ತೆ ಮೇಲೇಳಲಿ ಭಾರತ' ನಿರ್ಮಾಣ: ಸವಾಲುಗಳು ಮತ್ತು ಮುಂದಿನ ದಾರಿ

Last Updated : May 14, 2021, 8:27 PM IST

ABOUT THE AUTHOR

...view details