ಸಮರಕಂದ್ (ಉಜ್ಬೆಕಿಸ್ತಾನ್): ಭಾರತವನ್ನು ಸರಕುಗಳ ಉತ್ಪಾದನಾ ಹಬ್ ಮಾಡುವುದು ತಮ್ಮ ಉದ್ದೇಶ ಎಂದು ಶುಕ್ರವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಶಾಂಘೈ ಸಹಕಾರ ಸಂಸ್ಥೆ - ಎಸ್‌ಸಿಒ ಶೃಂಗಸಭೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ಇತರರ ಉಪಸ್ಥಿತಿಯಲ್ಲಿ ಇಂದಿನ ಸಭೆ ಪ್ರಾರಂಭವಾಯಿತು.
ಪ್ರಾದೇಶಿಕ ಭದ್ರತಾ ಸವಾಲುಗಳು, ವ್ಯಾಪಾರ ಮತ್ತು ಇಂಧನ ಪೂರೈಕೆಯನ್ನು ಉತ್ತೇಜಿಸುವ ಇತರ ವಿಷಯಗಳ ಕುರಿತು ಶೃಂಗಸಭೆಯಲ್ಲಿ ಚರ್ಚಿಸಲು ವೇದಿಕೆ ಸಿದ್ಧವಾಗಿದೆ. ಪ್ರಧಾನಿ ಮೋದಿ ಅವರು ಪುಟಿನ್ ಮತ್ತು ಉಜ್ಬೆಕ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಸೇರಿದಂತೆ ಇತರ ಜೊತೆಯಲ್ಲಿ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ.