ನವದೆಹಲಿ: ದೇಶದ ಕೆಲವೊಂದು ರಾಜ್ಯಗಳಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ವಿವಿಧ ರಾಜ್ಯಗಳಲ್ಲಿನ ಕೊರೊನಾ ಸೋಂಕಿತ ಪ್ರಕರಣ ಹಾಗೂ ವ್ಯಾಕ್ಸಿನೇಷನ್ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲಿ ಕೊರೊನಾ 3ನೇ ಅಲೆ ಎಚ್ಚರಿಕೆ ನೀಡಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆಯಲ್ಲಿ ಭಾಗಿಯಾಗಿದ್ದು, ಈ ವೇಳೆ ವಿವಿಧ ಸಚಿವರು, ಅಧಿಕಾರಿಗಳೊಂದಿಗೆ ನಮೋ ಮಹತ್ವದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜತೆಗೆ ವಿವಿಧ ರಾಜ್ಯಗಳಲ್ಲಿ ವ್ಯಾಕ್ಸಿನೇಷನ್ ಕುರಿತು ಮಾಹಿತಿ ಕಲೆ ಹಾಕಿದ್ದಾಗಿ ತಿಳಿದು ಬಂದಿದೆ.