ನವದೆಹಲಿ: ಮಹಾರಾಷ್ಟ್ರದ ಹಲವೆಡೆ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ಥವಾಗಿದೆ. ಈ ಹಿನ್ನೆಲೆಯಲ್ಲಿ ಉಂಟಾಗಿರುವ ಹಾನಿ ಮತ್ತು ಕೈಗೊಂಡಿರುವ ಮುಂಜಾಗೃತಾ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೊತೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ರೀತಿಯ ಸಹಾಯ ನೀಡುವುದಾಗಿ ಭರವಸೆ ನೀಡಿದ್ದಾರೆ.
Maharashtra ಮಳೆಗೆ ತತ್ತರ: ಪರಿಸ್ಥಿತಿ ಬಗ್ಗೆ ಸಿಎಂ ಠಾಕ್ರೆ ಜೊತೆ ಪ್ರಧಾನಿ ಮೋದಿ ಚರ್ಚೆ - Maharashtra Rain
ಮಹಾರಾಷ್ಟ್ರದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಮತ್ತು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೊತೆ ಚರ್ಚೆ ನಡೆಸಿದ್ದಾರೆ
ಭಾರಿ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಕೊಂಕಣ ರೈಲ್ವೆ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ರೈಲು ಸೇವೆಗಳನ್ನು ಸ್ಥಗಿತಗೊಳಿಸಿದೆ. ಅಷ್ಟೇ ಅಲ್ಲದೆ, ರಾಜ್ಯದ ಅನೇಕ ಭಾಗಗಳಲ್ಲಿ ರಸ್ತೆ ಸಂಚಾರಕ್ಕೂ ತೀವ್ರ ಅಡಚಣೆ ಉಂಟಾಗಿದ್ದು, ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇನ್ನು ಪರಿಹಾರ ಕಾರ್ಯಗಳಿಗೆ ಸಹಕರಿಸುವಂತೆ ಅಧಿಕಾರಿಗಳು ಎನ್ಡಿಆರ್ಎಫ್ಗೆ ಕರೆ ನೀಡಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೊತೆ ಮಾತುಕತೆ ನಡೆಸಿದ ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ "ಭಾರಿ ಮಳೆ ಮತ್ತು ಪ್ರವಾಹದಿಂದಾಗಿ ರಾಜ್ಯದ ಕೆಲವು ಭಾಗಗಳಲ್ಲಿ ಉದ್ಭವಿಸುವ ಪರಿಸ್ಥಿತಿ ಕುರಿತು ಚರ್ಚಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತೇವೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಬಯಸುತ್ತೇನೆ" ಎಂದು ಹೇಳಿದ್ದಾರೆ.