ನವದೆಹಲಿ: ಇಂದು ಪ್ರವಾಸಿ ಭಾರತೀಯ ದಿನ. ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಅನಿವಾಸಿ ಭಾರತೀಯರಿಗೆ ಶುಭಾಶಯ ಕೋರಿ, ಅವರನ್ನು ಕೊಡುಗೆಗಳನ್ನು ಶ್ಲಾಘಿಸಿದ್ದಾರೆ.
"ಅನಿವಾಸಿ ಭಾರತೀಯರು ಪ್ರಪಂಚದಾದ್ಯಂತ ಗುರುತಿಸಿಕೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಮೂಲಗಳ ಜೊತೆ ಸಂಪರ್ಕ ಹೊಂದಿದ್ದಾರೆ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಪ್ರವಾಸಿ ಭಾರತೀಯ ದಿವಸ್ ಮಹತ್ವವೇನು?
ದೇಶದ ಅಭಿವೃದ್ಧಿಗೆ ಸಾಗರೋತ್ತರ ಭಾರತೀಯರು ನೀಡುವ ಕೊಡುಗೆಯನ್ನು ಗುರುತಿಸಲು 2003ರಿಂದ ಪ್ರತಿ ವರ್ಷ ಜನವರಿ 9 ರಂದು ಪ್ರವಾಸಿ ಭಾರತೀಯ ದಿವಸ್ ಆಚರಿಸಲಾಗುತ್ತದೆ. 1915 ರಲ್ಲಿ ಈ ದಿನದಂದು ಮಹಾತ್ಮಾ ಗಾಂಧೀಜಿ ಅವರು ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಮರಳಿದ್ದರು. ನಂತರದ ದಿನಗಳಲ್ಲಿ ಅವರು ಭಾರತದಲ್ಲಿ ಸ್ವಾತಂತ್ರ್ಯ ಹೋರಾಟ ಪ್ರಾರಂಭಿಸಿದರು ಮತ್ತು ಅದರ ನೇತೃತ್ವ ವಹಿಸಿದರು. ಈ ಮೂಲಕ ಕೋಟ್ಯಂತರ ಭಾರತೀಯರ ಜೀವನವನ್ನು ಶಾಶ್ವತವಾಗಿ ಬದಲಾಯಿಸಿದರು. ಹೀಗಾಗಿ ಜನವರಿ 9 ಅನ್ನು ಪ್ರವಾಸಿ ಭಾರತೀಯ ದಿನವಾಗಿ ಆಚರಿಸಲಾಗುತ್ತದೆ.
ಇದನ್ನೂ ಓದಿ:ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಮಲ್ಲಿಕಾರ್ಜುನ ಖರ್ಗೆ ಚಾಲನೆ