ನವದೆಹಲಿ: ಯುವ ಮನಸ್ಸುಗಳಲ್ಲಿ ಶಿಕ್ಷಣದ ಸಂತೋಷವನ್ನು ಹರಡುವ ಶಿಕ್ಷಕರಿಗೆ ಶಿಕ್ಷಕರ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಜೊತೆಗೆ ಮಾಜಿ ರಾಷ್ಟ್ರಪತಿ ಎಸ್. ರಾಧಾಕೃಷ್ಣನ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದರು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದು ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.
ಶಿಕ್ಷಕರ ದಿನ: ಶುಭಾಶಯ ಕೋರಿದ ಪ್ರಧಾನಿ ಮೋದಿ - ರಾಧಾಕೃಷ್ಣನ್ ಅವರ ಜನ್ಮದಿನ
ಶಿಕ್ಷಕರ ದಿನಾಚರಣೆಯ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಎಲ್ಲ ಶಿಕ್ಷಕರಿಗೆ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕಠಿಣ ಪರಿಶ್ರಮಿ ಶಿಕ್ಷಕರಿಗೆ ಶುಭಾಶಯಗಳು ಎಂದು ಹೇಳಿದ್ದಾರೆ.
PM greets teachers pays homage to ex prez Radhakrishnan on Teachers Day
ಶಿಕ್ಷಕರ ದಿನದ ಶುಭಾಶಯಗಳು. ವಿಶೇಷವಾಗಿ ಯುವ ಮನಸ್ಸುಗಳಲ್ಲಿ ಶಿಕ್ಷಣದ ಸಂತೋಷವನ್ನು ಹರಡುವ ಎಲ್ಲಾ ಕಠಿಣ ಪರಿಶ್ರಮಿ ಶಿಕ್ಷಕರಿಗೆ ಶುಭಾಶಯಗಳು ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ನಮ್ಮ ಮಾಜಿ ರಾಷ್ಟ್ರಪತಿ ಡಾ. ರಾಧಾಕೃಷ್ಣನ್ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವ ನಮನ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.