ನವದೆಹಲಿ : ರಾಷ್ಟ್ರೀಯ ತಂತ್ರಜ್ಞಾನ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಕೋವಿಡ್ ವಿರುದ್ಧ ಹೋರಾಡುತ್ತಿರುವ ವಿಜ್ಞಾನಿಗಳು ಹಾಗೂ ತಂತ್ರಜ್ಞಾನಿಗಳನ್ನು ಪ್ರಶಂಸಿಸಿದ್ದಾರೆ. ಅವರು ಕೋವಿಡ್ ವಿರುದ್ಧ ಹೋರಾಡಲು ಕಳೆದೊಂದು ವರ್ಷದಿಂದ ಶ್ರಮಿಸುತ್ತಿದ್ದಾರೆ ಎಂದಿದ್ದಾರೆ.
ರಾಜಸ್ಥಾನದ ಪೋಖ್ರಾನ್‌ನಲ್ಲಿ 1998ರಲ್ಲಿ ಯಶಸ್ವಿಯಾಗಿ ನಡೆಸಲಾಗಿದ್ದ ಭೂಗತ ಪರಮಾಣು ಪರೀಕ್ಷೆಯ ವಾರ್ಷಿಕೋತ್ಸವದ ನೆನಪಿಗಾಗಿ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
ಹೀಗಾಗಿ, ಈ ದಿನದಂದು ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಭಾರತೀಯರ ಸಾಧನೆಗಳು ಮತ್ತು ಕೊಡುಗೆಗಳ ದಿನವಾಗಿ ಆಚರಿಸುತ್ತದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ರಾಷ್ಟ್ರೀಯ ತಂತ್ರಜ್ಞಾನ ದಿನದಂದು, ನಮ್ಮ ವಿಜ್ಞಾನಿಗಳು ಮತ್ತು ತಂತ್ರಜ್ಞಾನದ ಬಗ್ಗೆ ಆಸಕ್ತಿ ಹೊಂದಿರುವವರ ಕಠಿಣ ಪರಿಶ್ರಮ ಮತ್ತು ಸ್ಥಿರತೆಗೆ ನಾವು ನಮಸ್ಕರಿಸುತ್ತೇವೆ. ಅವರ ಮನೋಭಾವ ಮತ್ತು ಉತ್ಸಾಹವನ್ನು ನಾನು ಪ್ರಶಂಸಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:ತೆಲಂಗಾಣ ಸರ್ಕಾರಕ್ಕೆ ಹೈಕೋರ್ಟ್ ತರಾಟೆ... ನಾಳೆಯಿಂದ 10 ದಿನಗಳ ಕಾಲ ಲಾಕ್ಡೌನ್