ಕೋಲ್ಕತ್ತಾ:ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮದಿನದ ಅಂಗವಾಗಿ ‘ಪರಾಕ್ರಮ ದಿನ’ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳಕ್ಕೆ ಆಗಮಿಸಲಿದ್ದು, ಇತ್ತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರ‍್ಯಾಲಿ ನಡೆಸುತ್ತಿದ್ದಾರೆ.
ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಇನ್ನು ಮುಂದೆ ‘ಪರಾಕ್ರಮ ದಿನ’ವನ್ನಾಗಿ ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದ್ದು, ಈ ಸಮಾರಂಭದ ಉದ್ಘಾಟನೆಯನ್ನು ಕೋಲ್ಕತ್ತಾದ ವಿಕ್ಟೋರಿಯಾ ಸ್ಮಾರಕದಲ್ಲಿ ಪಿಎಂ ಮೋದಿ ನೆರವೇರಿಸಲಿದ್ದಾರೆ. ನೇತಾಜಿ ಭವನ ಹಾಗೂ ರಾಷ್ಟ್ರೀಯ ಗ್ರಂಥಾಲಯಕ್ಕೆ ಕೂಡ ಮೋದಿ ಭೇಟಿ ನೀಡಲಿದ್ದಾರೆ.